ಜನರ ಬಯಕೆಯಂತೆ ರಾಜಕೀಯ ಪ್ರವೇಶ: ಡಾ.ಮಂಜುನಾಥ್ಜನರ ಒತ್ತಾಸೆಯಂತೆ ರಾಜಕೀಯ ಕ್ಷೇತ್ರ ಪ್ರವೇಶ ಮಾಡಿ, ಬಡ ಜನರ ಸೇವೆ ಮಾಡಬೇಕೆಂಬ ಸಂಕಲ್ಪದೊಂದಿಗೆ ಮುನ್ನಡೆ ದಿದ್ದೇನೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲು ಅವಕಾಶ ಕಲ್ಪಿಸಿದ್ದಾರೆ. ಜನರ ಪ್ರೀತಿ ವಿಶ್ವಾಸ ಒಂದೇ ನನಗೆ ಬಹುದೊಡ್ಡ ಆಸ್ತಿ ಎಂದು ಖ್ಯಾತ ಹೃದ್ರೋಗ ತಜ್ಞ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪದ್ಮಶ್ರೀ ಡಾ.ಮಂಜುನಾಥ್ ಹೇಳಿದ್ದಾರೆ.