ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಲು ನಾಗರಘಟ್ಟ ಗ್ರಾಮಸ್ಥರ ಒತ್ತಾಯತಾಲೂಕಿನ ನೊಣವಿನಕೆರೆ ಹೋಬಳಿ ನಾಗರಘಟ್ಟ ಗ್ರಾಮದಲ್ಲಿ ಸರ್ಕಾರದ ವತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ಸಮರ್ಪಕ ನಿರ್ವಹಣೆ ಇಲ್ಲದೆ ಕೆಟ್ಟು ನಿಂತಿದ್ದು, ಈ ಬಗ್ಗೆ ಸಂಬಂದಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.