ಶಿಕ್ಷಣ ಕ್ಷೇತ್ರ ಅಭಿವೃದ್ಧಿ ಮಾಡುವ ವ್ಯಕ್ತಿಯನ್ನು ಆಯ್ಕೆ ಮಾಡಿ ಶಿಕ್ಷಣ ಕ್ಷೇತ್ರದ ಉಳಿವಿಗಾಗಿರುವ ಚುನಾವಣೆ ಇದಾಗಿದ್ದು, ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ವೈ.ಎ. ನಾರಾಯಣಸ್ವಾಮಿಯವರನ್ನು ಮತ್ತೊಮ್ಮೆ ಗೆಲ್ಲಿಸಬೇಕೆಂದು ಬಿಜೆಪಿ ಮುಖಂಡ ಕೆ.ಎಸ್. ಸದಾಶಿವಯ್ಯ ಮನವಿ ಮಾಡಿದ್ದಾರೆ.