ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಯತ್ನಪ್ರತಿಭಟನಾ ಸಭೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬರುತ್ತಿದ್ದ ಬಜರಂಗದಳ ಮುಖಂಡ ಪುತ್ತೂರಿನ ಮುರಳಿಕೃಷ್ಣ ಹಸಂತಡ್ಕ ಅವರನ್ನು ಪೊಲೀಸರು ತಡೆದ ಕ್ರಮ ಖಂಡಿಸಿ, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್ ಹಾಗೂ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದ್ದಾರೆ.