ಮಹಿಳೆಯರ ಸರ್ವತೋಮುಖ ಅಭಿವೃದ್ದಿಗೆ ಐದು ಗ್ಯಾರಂಟಿ ಯೋಜನೆಮಹಿಳೆಯರು ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕೆಂದು ರಾಜ್ಯ ಸರ್ಕಾರದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅದರ ಫಲವನ್ನು ಈಗಾಗಲೇ ಮಹಿಳೆಯರು ಪಡೆದುಕೊಳ್ಳುತ್ತಿದ್ದು, ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.