ಸಮಾಜದ ಕಂದಾಚಾರವನ್ನು ಪ್ರಶ್ನಿಸುವ ಕಥನವಿದು: ಕೃಷ್ಣಮೂರ್ತಿ ಕಥಾ ಪರಿಸರದ ಸಂಕೀರ್ಣತೆಯ ಬಗೆಗಿನ ತಿಳಿವು, ಕಥಾವಸ್ತುವಿನ ಚೆಲುವು, ನೋವು, ವಿಷಾದವನ್ನು ವಿವರಿಸಲು ಆಯ್ದುಕೊಂಡ ಭಾಷೆಯ ವಿಧಾನ, ಸ್ಥಳೀಯತೆ, ಪ್ರಾದೇಶಿಕತೆಯ ದಟ್ಟ ಪ್ರತಿಫಲನ, ಪ್ರತಿ ಕಥೆಗಳಿಗೂ ಭಿನ್ನವಾಗಿ ರೂಪಿಸಿಕೊಂಡ ನುಡಿಗಟ್ಟು ಮತ್ತು ವಿನ್ಯಾಸ, ಗಾಢ ವಾಸ್ತವ ಪ್ರಜ್ಞೆ, ಕನಸಿನ ಕನವರಿಕೆ, ಬದುಕಿನ ಸೂಕ್ಷ್ಮತೆ, ಅಸಂಗತತೆಯನ್ನು ವಿವರಿಸಲು ಕಥೆಗಾರ ನೀಡುವ ರೂಪಕಗಳ ಗೊಂಚಲುಗಳು, ಸಿದ್ಧ ಮಾದರಿಯಿಂದ ಹೊರಬಂದು ನೇಯ್ದ ಭರವಸೆ ಹುಟ್ಟಿಸುವ ಕಥೆಗಳು ಇಲ್ಲಿವೆ.