ವಿದ್ಯಾರ್ಥಿಗಳು ಸಾಧಕರನ್ನು ಆದರ್ಶವಾಗಿಟ್ಟುಕೊಳ್ಳಿಸಾಧಕರು ಸಾವಿರಕ್ಕೆ ಒಬ್ಬರು, ವಿದ್ಯಾರ್ಥಿಗಳು ಸಾವಿರಕ್ಕೆ ಒಬ್ಬ ಸಾಧಕರಾಗಬೇಕಾದರೆ ಡಾ.ಬಿ.ಆರ್. ಅಂಬೇಡ್ಕರ್, ಬುದ್ಧ, ಬಸವ, ಕುವೆಂಪು ಮುಂತಾದ ದಾರ್ಶನಿಕರನ್ನು ಆದರ್ಶವಾಗಿಟ್ಟುಕೊಂಡು ಹೆಚ್ಚು ಹೆಚ್ಚು ಅಧ್ಯಯನ ಮಾಡಬೇಕೆಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆ ನಹೀದಾ ಜಮ್ ಜಮ್ ಅಭಿಪ್ರಾಯಪಟ್ಟರು.