ಕನ್ನಡಸೇನೆ ಹೊಟ್ಟೆಪಾಡಿಗೆ ಹುಟ್ಟಿಕೊಂಡ ಸಂಸ್ಥೆಯಲ್ಲಕನ್ನಡಸೇನೆ ಹೊಟ್ಟೆಪಾಡಿಗಾಗಿ ಹುಟ್ಟಿಕೊಂಡ ಸಂಸ್ಥೆಯಲ್ಲ. ಕನ್ನಡ ನಾಡು, ನುಡಿ, ನೆಲ, ಜಲ ವಿಚಾರದಲ್ಲಿ ಎಂದಿಗೂ ರಾಜೀ ಮಾಡಿಕೊಳ್ಳದೆ, ಜನರಿಗೆ ತೊಂದರೆ ನೀಡಿದೆ ತತ್ವ ಸಿದ್ಧಾಂತಕ್ಕೆ ಬದ್ಧವಾಗಿರುವ ಸಂಘ ಎಂದು ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಆರ್. ಕುಮಾರ್ ಪ್ರತಿಪಾದಿಸಿದ್ದಾರೆ.ನಗರದ ವಿಘ್ನೇಶ್ವರ ಕಂಪಫ್ಟ್ನಲ್ಲಿ ಕನ್ನಡ ಸೇನೆ ವತಿಯಿಂದ ಹಮ್ಮಿಕೊಂಡಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಳೆದ 35 ವರ್ಷಗಳಿಂದಲೂ ಯಾರಿಂದಲೂ ನಯಾಪೈಸೆ ಪಡೆಯದೆ, ತಮ್ಮ ಕೈಯಿಂದ ಹಣ ಹಾಕಿ ಹೋರಾಟ ನಡೆಸುತ್ತಿರುವ ಏಕೈಕ ಸಂಸ್ಥೆ ಕನ್ನಡ ಸೇನೆ ಎಂದರು.