ಪ್ರತಿಭೆ ಒಂದು ವರ್ಗಕ್ಕೆ ಸೀಮಿತವಾದುದಲ್ಲ: ನಾಹೀದಾ ಜಮ್ ಜಮ್ಪ್ರತಿಭೆ ಮತ್ತು ಕೌಶಲ್ಯ ಯಾವುದೇ ಒಂದು ವರ್ಗಕ್ಕೆ ಮಾತ್ರ ಸೀಮಿತವಾದುದಲ್ಲ. ಅದನ್ನು ನಮಗೆ ಪ್ರೇರಣೆಯಾಗಿ ತೋರಿಸಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆ ನಾಹಿದಾ ಜಮ್ ಜಮ್ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಮಕೂರು ವಿಶ್ವವಿದ್ಯಾನಿಲಯ, ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ, ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ, ಗುಬ್ಬಿ ಸರ್ಕಾರಿ ಪ್ರಥಮ ದರ್ಜೆ ಸ್ವಾಯತ್ತ ಕಾಲೇಜು ಸಂಯುಕ್ತಾಶ್ರಯದಲ್ಲಿ ನಡೆದ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.