ಕಾಲೇಜು ಕ್ಯಾಂಪಸ್ ಗಳಲ್ಲಿ ಡ್ರಗ್ಸ್: ಕ್ರಮಕ್ಕೆ ಮನವಿಕಾಲೇಜು ಕ್ಯಾಂಪಸ್ ಗಳಲ್ಲಿ ಡ್ರಗ್ಸ್ ಮತ್ತು ವಿಶೇಷವಾಗಿ ಗಾಂಜಾದಂತಹ ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳು ವ್ಯಾಪಕವಾಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಅಸೋಸಿಯೇಷನ್ ಫಾರ್ ಸಿವಿಲ್ ರೈಟ್ಸ್ ಪ್ರೊಟೆಕ್ಷನ್ ಇಂಡಿಯಾ (ಎಪಿಸಿಆರ್) ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಮನವಿ ಸಲ್ಲಿಸಿದ್ದಾರೆ.