ಜಲಜೀವನ ಮಿಷನ್ ಅವೈಜ್ಞಾನಿಕ ಕಾಮಗಾರಿ : ಗ್ರಾಮಸ್ಥರ ಆಕ್ರೋಶತಾಲೂಕಿನ ಈಚನೂರು ಗ್ರಾಮ ಸೇರಿದಂತೆ ಸಾಕಷ್ಟು ಗ್ರಾಮಗಳಲ್ಲಿ ಜೆಜೆಎಂ ಮಹತ್ವಾಂಕ್ಷಿ ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳು ಅವೈಜ್ಞಾನಿಕವಾಗಿದ್ದು, ಪೈಪ್‌ಲೈನ್ ಗುಂಡಿಗಳನ್ನು ತೆರೆದು ಹಾಗೆಯೇ ಬಿಟ್ಟು ಹೋಗಿದ್ದು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಕ್ರಮಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.