ಸಮಸ್ಯಾತ್ಮಕ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ,ಪರಿಶೀಲಿಸಿ: ಡೀಸಿ ಶುಭಾ ಕಲ್ಯಾಣ್ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಪ್ರತಿನಿತ್ಯ ಸಮರ್ಪಕ ನೀರು ಪೂರೈಕೆಯಾಗುವಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆ ಇರುವ ಪ್ರದೇಶಗಳ ನಿವಾಸಿಗಳು ನೀರನ್ನು ಸಣ್ಣ ಹಾಗೂ ದೊಡ್ಡ ಟ್ಯಾಂಕ್‌ಗಳಲ್ಲಿ ಸಂಗ್ರಹಿಸುತ್ತಾರೆ. ಇಂತಹ ಸ್ಥಳಗಳಲ್ಲಿ ಅತೀ ಹೆಚ್ಚು ಸೊಳ್ಳೆಗಳು ಉತ್ಪತ್ತಿಗೊಂಡು ಮಲೇರಿಯಾ, ಡೆಂಗ್ಯೂವಿನಂತಹ ಅನೇಕ ಕಾಯಿಲೆಗಳು ಉಲ್ಭಣಗೊಳ್ಳುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಅಧಿಕಾರಿಗಳು ಸೇರಿ ಮತ್ತಿತರ ತಾಲೂಕು ಮಟ್ಟದ ಅಧಿಕಾರಿಗಳು ಅಂತಹ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಸೂಚಿಸಿದರು.