ತುಮಕೂರು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಿ: ಎಸ್.ಪಿ.ಮುದ್ದಹನುಮೇಗೌಡತುಮಕೂರು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಕನಸು ಕಂಡಿರುವ ತಮಗೆ ಜಿಲ್ಲೆಯ ಜನತೆಯ ಬೆಂಬಲ ಬೇಕಿದೆ. ಕಳೆದ ಬಾರಿ ಸಂಸದನಾದ ಸಂಧರ್ಭದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಮುಂಬರುವ ದಿನಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಇನ್ನೂ ಸಾಕಷ್ಟು ಕೆಲಸಗಳನ್ನು ಮಾಡುವ ಬಯಕೆ ಇದೆ. ಹಾಗಾಗಿ ನನ್ನನ್ನು ಬೆಂಬಲಿಸಿ ಎಂದು ಮಾಜಿ ಸಂಸದ ಹಾಗೂ ಕಾಂಗ್ರೆಸ್ ನ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಜನರಲ್ಲಿ ಕಳಕಳಿಯ ಮನವಿ ಮಾಡಿಕೊಂಡಿದ್ದಾರೆ.