ವಾಣಿಜ್ಯಶಾಸ್ತ್ರಕ್ಕೆ ಉತ್ತಮ ಅವಕಾಶಗಳಿವೆ: ಗಂಗಾಧರ್ಕನ್ನಡಪ್ರಭ ವಾರ್ತೆ ತುಮಕೂರುವಾಣಿಜ್ಯಶಾಸ್ತ್ರಕ್ಕೆ ಪ್ರಸ್ತುತ ದಿನಗಳಲ್ಲಿ ಉತ್ತಮವಾದ ಅವಕಾಶಗಳಿದ್ದು, ಕಂಪ್ಯೂಟರ್ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳ ಪರಿಚಯ ಮಾಡಿಸುವ ಕೆಲಸ ಶಿಕ್ಷಕರಿಂದ ಆಗಬೇಕೆಂದು ಪದವಿ ಪೂರ್ವ ಉಪನಿರ್ದೇಶಕ ಗಂಗಾಧರ್ ತಿಳಿಸಿದ್ದಾರೆ.ನಗರದ ಜಯದೇವ ಹಾಸ್ಟಲ್ ಆವರಣದಲ್ಲಿರುವ ಅನನ್ಯ ಇನ್‌ಸ್ಟಿಟ್ಯೂಟ್ ಅಫ್ ಕಾರ್ಮಸ್ ಅಂಡ್ ಮ್ಯಾನೇಜ್‌ಮೆಂಟ್ ಕಾಲೇಜಿನ ಸಭಾಂಗಣದಲ್ಲಿ ಶಾಲಾಶಿಕ್ಷಣ(ಪಿಯು)ಇಲಾಖೆ, ತುಮಕೂರು ಜಿಲ್ಲಾ ವ್ಯವಹಾರ ಅಧ್ಯಯನ ಉಪನ್ಯಾಸಕರ ವೇದಿಕೆ, ಅನನ್ಯ ಇನ್‌ಸ್ಟಿಟ್ಯೂಟ್ ಅಫ್ ಕಾರ್ಮಸ್ ಅಂಡ್ ಮ್ಯಾನೇಜ್‌ಮೆಂಟ್ ಪೋರಂ ವತಿಯಿಂದ ವಾಣಿಜ್ಯಶಾಸ್ತ್ರ ಉಪನ್ಯಾಸಕರಿಗೆ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಉದ್ದೇಶಿಸಿ ಮಾತನಾಡುತಿದ್ದ ಅವರು, ಬದಲಾವಣೆಗೆ ಅನುಗುಣವಾಗಿ ಮಕ್ಕಳನ್ನು ತಯಾರುವ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.