ಬರಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿ: ಡೀಸಿ ಶುಭ ಕಲ್ಯಾಣ್ಮಳೆಯ ಕೊರತೆಯಿಂದ ಜಿಲ್ಲೆಯ 10 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಿಸಿದ್ದು, ಬೆಳೆ ನಷ್ಟ ಪರಿಹಾರ, ಕುಡಿಯುವ ನೀರಿನ ವ್ಯವಸ್ಥೆ, ಮೇವು ಕೊರತೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿರುವ ಬರಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.