• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • tumakuru

tumakuru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಮಕೂರು-ದಾವಣಗೆರೆ ರೈಲ್ವೆ ಕಾಮಗಾರಿ ಆರಂಭಿಸಿ: ಆರ್.ವಿ.ಪುಟ್ಟಕಾಮಣ್ಣ
ತುಮಕೂರು-ದಾವಣಗೆರೆ ರೈಲು ಮಾರ್ಗದ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಿ ಶಿರಾ ತಾಲೂಕಿನ ಜನತೆಯ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿ ಎಂದು ತುಮಕೂರು ಜಿಲಾ ರೈಲ್ವೆ ಹೋರಾಟ ಕ್ರಿಯಾ ಸಮಿತಿಯ ಅಧ್ಯಕ್ಷ ಆರ್.ವಿ. ಪುಟ್ಟಕಾಮಣ್ಣ ಒತ್ತಾಯಿಸಿದರು.
ಅಹವಾಲು ಆಲಿಸಿದ ಮೇಯರ್, ಆಯುಕ್ತೆ
ನಗರದ 35ನೇ ವಾರ್ಡ್ ವ್ಯಾಪ್ತಿಗೆ ಬರುವ ಸಿದ್ದರಾಮೇಶ್ವರ ಬಡಾವಣೆಯ ಪೂರ್ವ ಭಾಗದ ಪ್ರದೇಶ ಮೂಲಸೌಕರ್ಯ ವಂಚಿತವಾಗಿರುವ ಹಿನ್ನೆಲೆಯಲ್ಲಿ ಪಾಲಿಕೆ ಮೇಯರ್ ಪ್ರಭಾವತಿ ಸುಧೀಶ್ವರ್, ಆಯುಕ್ತೆ ಬಿ.ವಿ.ಅಶ್ವಿಜ ನೇತೃತ್ವದಲ್ಲಿ ಪಾಲಿಕೆ ಸದಸ್ಯರು, ನಗರ ಯೋಜನಾ ಸುಧಾರಣಾ ಸ್ಥಾಯಿ ಸಮಿತಿ ಅಧ್ಯಕ್ಷರು ಶಾಂತಿನಿಕೇತನ ವಿದ್ಯಾಪೀಠ ಶಾಲೆ ಸುತ್ತುಮುತ್ತಲ ಪ್ರದೇಶಗಳಿಗೆ ಭೇಟಿಕೊಟ್ಟು ನಾಗರಿಕರ ಅಹವಾಲು ಆಲಿಸಿದರು.
ಕನ್ನಡಸೇನೆ ಹೊಟ್ಟೆಪಾಡಿಗೆ ಹುಟ್ಟಿಕೊಂಡ ಸಂಸ್ಥೆಯಲ್ಲ
ಕನ್ನಡಸೇನೆ ಹೊಟ್ಟೆಪಾಡಿಗಾಗಿ ಹುಟ್ಟಿಕೊಂಡ ಸಂಸ್ಥೆಯಲ್ಲ. ಕನ್ನಡ ನಾಡು, ನುಡಿ, ನೆಲ, ಜಲ ವಿಚಾರದಲ್ಲಿ ಎಂದಿಗೂ ರಾಜೀ ಮಾಡಿಕೊಳ್ಳದೆ, ಜನರಿಗೆ ತೊಂದರೆ ನೀಡಿದೆ ತತ್ವ ಸಿದ್ಧಾಂತಕ್ಕೆ ಬದ್ಧವಾಗಿರುವ ಸಂಘ ಎಂದು ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಆರ್. ಕುಮಾರ್ ಪ್ರತಿಪಾದಿಸಿದ್ದಾರೆ.ನಗರದ ವಿಘ್ನೇಶ್ವರ ಕಂಪಫ್ಟ್‌ನಲ್ಲಿ ಕನ್ನಡ ಸೇನೆ ವತಿಯಿಂದ ಹಮ್ಮಿಕೊಂಡಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಳೆದ 35 ವರ್ಷಗಳಿಂದಲೂ ಯಾರಿಂದಲೂ ನಯಾಪೈಸೆ ಪಡೆಯದೆ, ತಮ್ಮ ಕೈಯಿಂದ ಹಣ ಹಾಕಿ ಹೋರಾಟ ನಡೆಸುತ್ತಿರುವ ಏಕೈಕ ಸಂಸ್ಥೆ ಕನ್ನಡ ಸೇನೆ ಎಂದರು.
ವಿಷ್ಣು ಸಮಾಧಿ ಸ್ಥಳವನ್ನು ಪುಣ್ಯ ಭೂಮಿಯನ್ನಾಗಿ ಘೋಷಿಸಿ: ಮೂರ್ತಿ ಎಸ್. ಸಿಂಹ
ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಡಾ. ವಿಷ್ಣು ಪುಣ್ಯಭೂಮಿ ಎಂದು ಘೋಷಿಸುವಂತೆ ಜಿಲ್ಲಾ ವಿಷ್ಣು ಸೇನಾ ಸಮಿತಿಯ ಜಿಲ್ಲಾಧ್ಯಕ್ಷ ಮೂರ್ತಿ ಎಸ್. ಸಿಂಹ ಸರ್ಕಾರವನ್ನು ಒತ್ತಾಯಿಸಿದ್ದಾರೆ. ನಗರದ ಜಿಲ್ಲಾ ವಿಷ್ಣುಸೇನಾ ಸಮಿತಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಭಾರತೀಯ ಸಿನಿಮಾ ರಂಗದ ಮೇರು ನಟರಾಗಿದ್ದ ಡಾ. ವಿಷ್ಣು ಕನ್ನಡ ಚಿತ್ರರಂಗದ ಅಗ್ರಗಣ್ಯ ನಾಯಕ ನಟರಾಗಿ ಅತ್ಯಂತ ಗುಣಾತ್ಮಕ ಸದಭಿರುಚಿಯ ಚಿತ್ರಗಳನ್ನು ನೀಡಿ, ಕರ್ನಾಟಕದ ನಾಡು-ನುಡಿಗೆ ಅನ್ಯಾಯವಾದಾಗ ಬೀದಿಗಿಳಿದು ಹೋರಾಟಕ್ಕೆ ಭಾಗವಹಿಸುತ್ತಿದ್ದರು ಎಂದರು.
ಕನ್ನಡಿಗರು ಕಸಾಪ ಸದಸ್ಯತ್ವ ಪಡೆದುಕೊಳ್ಳಿ
ಕೊರಟಗೆರೆ: ಕನ್ನಡ ಸಾಹಿತ್ಯ ಸಮೃದ್ಧವಾದ ಪರಂಪರೆಯನ್ನು ಹೊಂದಿದ್ದು ಕನ್ನಡಿಗರಾದ ನಾವು ಪ್ರತಿಯೊಬ್ಬರೂ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವವನ್ನು ಪಡೆಯುವ ಮೂಲಕ ಕನ್ನಡ ನಾಡು ಮತ್ತು ನುಡಿಯ ಹಿರಿಮೆಯನ್ನು ಬೆಳೆಗಿಸೊಣ್ಣ ಎಂದು ಕೊರಟಗೆರೆ ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಈರಣ್ಣ ತಿಳಿಸಿದರು.ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ನೂತನವಾಗಿ ಆನೈಲ್‌ನ್ ಮೂಲಕ ಸಾಹಿತ್ಯ ಪರಿಷತ್‌ನ ಆಜೀವ ಸದಸ್ಯತ್ವ ಪಡೆದ ಸದಸ್ಯರಿಗೆ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಿ ಮಾತನಾಡಿದರು.
ಭಾರತದಲ್ಲಿ 57 ಸಾವಿರಕ್ಕೂ ಹೆಚ್ಚು ಮಹಿಳಾ ಸಂಶೋಧಕರು
ಭಾರತವು ಒಟ್ಟು 57 ಸಾವಿರಕ್ಕೂ ಹೆಚ್ಚು ಮಹಿಳಾ ಸಂಶೋಧಕರನ್ನು ಹೊಂದಿದೆ. ಇದು ದೇಶದ ಒಟ್ಟು ಸಂಶೋಧಕರ ಶೇ.16.6ರಷ್ಟಿದೆ. ಸಂಶೋಧನೆ, ವಿಜ್ಞಾನ-ತಂತ್ರಜ್ಞಾನದ ಮೇಲಿರುವ ಆಸಕ್ತಿ, ದೂರದೃಷ್ಟಿಯನ್ನು ಮಹಿಳೆಯರು ಸ್ವೀಕರಿಸಿರುವ ಮಹತ್ವವನ್ನು ಸಾರುತ್ತದೆ ಎಂದು ನವದೆಹಲಿಯ ಏಮ್ಸ್‌ ನ ಡಾ. ಉಮಾಕುಮಾರ್ ಹೇಳಿದರು
ಆಡಳಿತ ಯಂತ್ರ ಚುರುಕುಗೊಳ್ಳಬೇಕು: ಟಿ.ಬಿ. ಜಯಚಂದ್ರ
ಶಿರಾ ತಾಲೂಕಿನಲ್ಲಿ ಹಲವಾರು ವರ್ಷಗಳಿಂದ ಕಂದಾಯ ಇಲಾಖೆಗೆ ಸಂಬಂಧಿಸಿದ ರೈತರ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿದ್ದು, ಅವುಗಳನ್ನು ಈ ಕೂಡಲೇ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಆಡಳಿತ ಯಂತ್ರವನ್ನು ಚುರುಕುಗೊಳಿಸಲಾಗುವುದು ಎಂದು ಶಿರಾ ಶಾಸಕ ಹಾಗೂ ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರು ಹೇಳಿದರು.
ದಲಿತರ, ಮಹಿಳೆಯರ ರಕ್ಷಣೆಯಲ್ಲಿ ಸರ್ಕಾರ ವಿಫಲ
ರಾಜ್ಯದಲ್ಲಿ ದಲಿತರ, ಮಹಿಳೆಯರ ಮೇಲಿನ ದೌರ್ಜನ್ಯ, ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದರೂ ಇವುಗಳ ತಡೆಗೆ ರಾಜ್ಯ ಸರ್ಕಾರ ಗಂಭೀರ ಪ್ರಯತ್ನ ಮಾಡುತ್ತಿಲ್ಲ. ಬರ ಬಂದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೆರವಾಗಬೇಕಾದ ಸರ್ಕಾರ ರೈತರನ್ನು ನಿರ್ಲಕ್ಷ್ಯ ಮಾಡಿದೆ. ಬೆಳಗಾವಿಯ ದಲಿತ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣದ ಬಗ್ಗೆ ಬಿಜೆಪಿ ಶಾಸಕರ ಹೋರಾಟ ಮಾಡುವ ತನಕ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಹಿಳೆಯ ರಕ್ಷಣೆಗೆ ಬರಲಿಲ್ಲ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ಶಿವಪ್ರಸಾದ್ ಆಪಾದಿಸಿದರು.
ಅನಧಿಕೃತ ಸ್ಕ್ಯಾನಿಂಗ್ ಕೇಂದ್ರಗಳ ವಿರುದ್ದ ಕ್ರಮ: ಡಿಎಚ್‌ಒ
ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಮತ್ತು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಿಂದ ಅನುಮತಿ ಪಡೆಯದೆ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಪ್ರಾರಂಭಿಸಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವ ರೇಡಿಯೋಲಜಿಸ್ಟ್‌ಗಳ ವಿರುದ್ಧ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ತಂತ್ರ ವಿಧಾನಗಳ ನಿಷೇಧ ಕಾಯ್ದೆಯಡಿಯಲ್ಲಿ ಶಿಸ್ತು ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಂಜುನಾಥ್ ತಿಳಿಸಿದರು.
ಗಡಿಭಾಗದ ಜನರ ಸಮಸ್ಯೆ ಆಲಿಸಿದ ಎಸ್‌ಪಿ ಅಶೋಕ್
ಗಡಿಭಾಗದ ಜನರ ಹಿತದೃಷ್ಟಿಯಿಂದ ಅವರ ಸಮಸ್ಯೆಗಳನ್ನು ಆಲಿಸಲು ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ. ಜನರು ಜಿಲ್ಲಾಕೇಂದ್ರಗಳಿಗೆ ಬಂದು ಹೋಗಲು ಬಹಳ ದೂರ ಹಾಗೂ ಸಮಯದ ಅಭಾವವನ್ನು ತಪ್ಪಿಸಲು ಆಯಾ ಹೋಬಳಿಯ ಪೊಲೀಸ್ ಠಾಣೆಗಳಲ್ಲಿ ಜನಸಂಪರ್ಕ ಸಭೆಯನ್ನು ನಡೆಸಿ ಕುಂದುಕೊರತೆ ನಿವಾರಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ಕೆ. ತಿಳಿಸಿದರು.
  • < previous
  • 1
  • ...
  • 523
  • 524
  • 525
  • 526
  • 527
  • 528
  • 529
  • 530
  • 531
  • 532
  • 533
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved