ನೊಣವಿನಕೆರೆ ಶ್ರೀ ಕಾಡಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಅಜ್ಜಯ್ಯನ ಜಾತ್ರಾ ಮಹೋತ್ಸವ, ಕರಿಬಸವ ಸ್ವಾಮಿಗಳ 232ನೇ ವಾರ್ಷಿಕ ಸ್ಮರಣೋತ್ಸವ ಹಾಗೂ ಕರಿಬಸವದೇಶಿಕೇಂದ್ರ ಸ್ವಾಮಿಗಳ 17ನೇ ವರ್ಷದ ಪುಣ್ಯಾರಾಧನೆ, ರಥೋತ್ಸವ, ಧರ್ಮಸಭೆ ಮತ್ತು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವು ಫೆ.23ರವರೆಗೆ ನಡೆಯಲಿದೆ ಎಂದು ಕಾಡಸಿದ್ದೇಶ್ವರ ಸಂಸ್ಥಾನಮಠದ ಶ್ರೀ ಡಾ.ಕರಿವೃಷಭದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ತಿಳಿಸಿದ್ದಾರೆ.