ತುಮಕೂರು-ಬೆಂಗಳೂರು ನಡುವೆ ೪ ರೈಲು ಮಾರ್ಗಬೆಳೆಯುತ್ತಿರುವ ತುಮಕೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶ, ರೈಲು ಪ್ರಮಾಣ ಅವಲಂಬನೆ ಹೆಚ್ಚಾಗುವ ಭವಿಷ್ಯದ ದೃಷ್ಟಿಯಿಂದ ತುಮಕೂರು-ಬೆಂಗಳೂರು ನಡುವೆ ನಾಲ್ಕು ರೈಲು ಮಾರ್ಗ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಹೆಚ್ಚುವರಿ ರೈಲುಗಳ ಸೇವೆ ಒದಗಿಸಲಾಗುತ್ತಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.