ಅಕ್ರಮಗಳಿಗೆ ಕಡಿವಾಣ ಹಾಕಿ, ದಲಿತರಿಗೆ ನ್ಯಾಯ ಕೊಡಿಸಿತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಅಕ್ರಮ ಚಟವಟಿಕೆಗಳು ನಡೆಯುತ್ತಿದ್ದು ಅಲ್ಲಿನ ಎಸ್ ಬಿ. ಕಾನ್ಸ್ಟೇಬಲ್ವೊಬ್ಬರು ಮಟ್ಕಾ ಮತ್ತು ಇಸ್ಪೀಟ್ ದಂಧೆ ಕೋರರ ಜೊತೆ ಶಾಮೀಲಾಗಿದ್ದು ರಾಜಾರೋಷವಾಗಿ ಈ ಅಕ್ರಮ ದಂಧೆಗಳು ನಡೆಯುತ್ತಿರುವ ಪರಿಣಾಮ ಈ ಭಾಗದ ಅನೇಕ ಮಂದಿ ಬಡ ಕುಟುಂಬಗಳು ಬೀದಿಗೆ ಬಿದ್ದಿವೆ ಎಂದು ಎಂದು ಜಿಲ್ಲಾ ಅಟ್ರಾಸಿಟಿ ಸಮಿತಿಯ ಸದಸ್ಯ ಪಾವಗಡದ ಡಿಜೆಎಸ್ ನಾರಾಯಣಪ್ಪ ಆರೋಪಿಸಿದ್ದಾರೆ.