ಸ್ವಚ್ಚತೆ ಕಾಪಾಡುವಲ್ಲಿ ನಿಲಯಪಾಲಕರ ಬೇಜವಾಬ್ದಾರಿವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಆರೋಗ್ಯದ ಹಿತದೃಷ್ಟಿ ಹಿನ್ನೆಲೆಯಲ್ಲಿ, ರಾಜ್ಯ ಮಕ್ಕಳ ರಕ್ಷಣೆ ಆಯೋಗದ ಸದಸ್ಯರಾದ ಡಾ.ಕೆ.ಟಿ.ತಿಪ್ಪೇಸ್ವಾಮಿ ಮತ್ತು ಇತರೇ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ , ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕ ಬಾಲಕಿಯರ ಹಾಸ್ಟೆಲ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ಹಾಸ್ಟೆಲ್ಗಳ ಅವ್ಯವಸ್ಥೆ ಹಾಗೂ ನಿರ್ವಹಣೆ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದರು.