ಅವೈಜ್ಞಾನಿಕ ಒಳಮೀಸಲಾತಿ ವಿರೋಧಿಸಿ ಪ್ರತಿಭಟನೆ ನಾಳೆದೋಷಪೂರಿತ ದತ್ತಾಂಶ ಪರಿಗಣಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ರಾಜ್ಯ ಸರ್ಕಾರ ಅವೈಜ್ಙಾನಿಕವಾಗಿ ವರ್ಗೀಕರಣ ಮಾಡಿದೆ ಎಂದು ಆಪಾದಿಸಿ, ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಸೆ.10 ರಂದು ಭೋವಿ, ಬಂಜಾರ, ಕೊರಚ, ಕೊರಮ ಹಾಗೂ ಅಲೆಮಾರಿ ಸಮುದಾಯಗಳಿಂದ ಬೆಂಗಳೂರು ಚಲೋ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಹಾಗೂ ಭೋವಿ ಸಂಘದ ಜಿಲ್ಲಾಧ್ಯಕ್ಷ ಓಂಕಾರ್ ತಿಳಿಸಿದರು.