ವೈಜ್ಞಾನಿಕ ಬೆಂಬಲ ಬೆಲೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹಉಂಡೆ ಕೊಬ್ಬರಿಗೆ ವೈಜ್ಞಾನಿಕ ಬೆಂಬಲ ಬೆಲೆ ನೀಡಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಪ್ರಾಂತ ರೈತ ಸಂಘ, ಜನಸ್ಪಂದನ ಟ್ರಸ್ಟ್ ವತಿಯಿಂದ ಜ.೨೩ರ ಗುರುವಾರ ಬೆಳಗ್ಗೆ ೧೦ರಿಂದ ಸಂಜೆ ೫ಗಂಟೆಯವರೆಗೆ ನಗರದ ಆಡಳಿತಸೌಧದ ಎದುರು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತಿದೆ ಎಂದು ರೈತ ಸಂಘದ ತಾ. ಅಧ್ಯಕ್ಷರಾದ ಜಯಾನಂದಯ್ಯ ತಿಳಿಸಿದರು.