ತಿಪಟೂರಿನ ಕುಡಿಯುವ ನೀರಿನ ಸಮಸ್ಯೆಗೆ ಶಾಸಕರೇ ಹೊಣೆ: ಕೆ.ಟಿ. ಶಾಂತಕುಮಾರ್ ಆಕ್ರೋಶಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ವಿದ್ಯುತ್ ನೀಡದ ಕಾರಣ ರೈತರು ತೋಟಗಳಿಗೆ ನೀರುಣಿಸಲು ಹೆಣಗಾಡಬೇಕಾದ ಪರಿಸ್ಥಿತಿ ತಲೆದೋರಿದ್ದು, ಯಾವಾಗ ಕರೆಂಟ್ ಇರುತ್ತದೆ, ಮತ್ಯಾವಾಗ ಕೈಕೊಡುತ್ತದೆ ಎಂಬ ಮಾಹಿತಿಯೂ ಬೆಸ್ಕಾಂನಿಂದ ಇಲ್ಲದ್ದರಿಂದ ರೈತರ ಪಾಡು ಹೇಳತೀರದಾಗಿದೆ. ರೈತರ ಜೀವನಾಡಿ ತೆಂಗು, ಅಡಿಕೆ ನೀರಿಲ್ಲದೆ ಸೊರಗುತ್ತಿದ್ದು, ಬೆಸ್ಕಾಂ ಸಮರ್ಪಕ ಕರೆಂಟ್ ನೀಡಬೇಕು. ರೈತರು ವಿದ್ಯುತ್ ಪರಿವರ್ತಕಗಳು ಸುಟ್ಟು ಹೋದರೆ ಲಕ್ಷಾಂತರ ರು. ಖರ್ಚು ಮಾಡಬೇಕಿದ್ದು ಈ ಬಗ್ಗೆ ಸರ್ಕಾರ ರೈತರ ಕಷ್ಟಕ್ಕೆ ಸ್ಪಂದಿಸಬೇಕಿದೆ ಎಂದರು.