ಋತುಚಕ್ರದ ಸ್ವಾಸ್ಥ್ಯದ ಅರಿವು ಮೂಡಿಸಿಋತುಸ್ರಾವದ ಸಮಯದಲ್ಲಿ ಸ್ಯಾನಿಟರಿ ಪ್ಯಾಡ್ ಕೊಳ್ಳಲು ಹಣವಿಲ್ಲದೆ ಹುಲ್ಲು, ಇಟ್ಟಿಗೆ, ಹಳೆಬಟ್ಟೆ, ಬೂದಿ ಹಾಗೂ ಇನ್ನಿತರ ಅನೈರ್ಮಲ್ಯ ವಸ್ತುಗಳನ್ನು ಗ್ರಾಮೀಣ ಭಾಗದ ಹೆಣ್ಣುಮಕ್ಕಳು ಬಳಸುತ್ತಿದ್ದಾರೆ. ಇದರಿಂದ ಕ್ಯಾನ್ಸರ್, ಗರ್ಭಕೋಶದ ಸಮಸ್ಯೆಯುಂಟಾಗಿ ಬದುಕನ್ನು ನಾಶಮಾಡಿಕೊಳ್ಳುತ್ತಿದ್ದಾರೆ ಎಂದು ವಿವಿ ಕುಲಸಚಿವೆ ನಾಹಿದಾ ಜಮ್ ಜಮ್ ಆತಂಕ ವ್ಯಕ್ತಪಡಿಸಿದರು.