ತುಮರಿ ಸೇತುವೆ ಒಂದು ಐತಿಹಾಸಿಕ ಮೈಲುಗಲ್ಲು- ಹಿನ್ನೀರಿನ ಜನರ ಬಹುಕಾಲದ ಕನಸು : ಸಂಸದ ರಾಘವೇಂದ್ರ

| Published : Sep 12 2024, 01:59 AM IST / Updated: Sep 12 2024, 12:59 PM IST

ತುಮರಿ ಸೇತುವೆ ಒಂದು ಐತಿಹಾಸಿಕ ಮೈಲುಗಲ್ಲು- ಹಿನ್ನೀರಿನ ಜನರ ಬಹುಕಾಲದ ಕನಸು : ಸಂಸದ ರಾಘವೇಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ನಿರ್ಮಾಣ ಸ್ಥಳಕ್ಕೆ ಮಂಗಳವಾರ ಭೇಟಿ ಕಾಮಗಾರಿ ಪರಿಶೀಲನೆ ನಡೆಸಿದ ಸಂಸದ ರಾಘವೇಂದ್ರ ತುಮರಿ ಸೇತುವೆ ಐತಿಹಾಸಿಕ ಮೈಲುಗಲ್ಲಾಗಲಿ ಎಂದು ಹೇಳಿದರು.

  ಸಾಗರ :  ಸಂಪರ್ಕ ಸೇತುವೆ ಬೇಕು ಎನ್ನುವ ಹಿನ್ನೀರಿನ ಜನರ ಬಹುಕಾಲದ ಕನಸು ಇನ್ನೆರಡು ಮೂರು ತಿಂಗಳಿನಲ್ಲಿ ನನಸಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ನಿರ್ಮಾಣ ಸ್ಥಳಕ್ಕೆ ಮಂಗಳವಾರ ಭೇಟಿ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ತುಮರಿ ಸೇತುವೆ ಐತಿಹಾಸಿಕ ಮೈಲುಗಲ್ಲಾಗಲಿದ್ದು, ಇದರಿಂದ ಮುಳುಗಡೆ ಸಂತ್ರಸ್ತರ ತ್ಯಾಗಕ್ಕೆ ಪ್ರತಿಫಲ ಸಿಕ್ಕಂತಾಗುತ್ತದೆ ಎಂದು ಹೇಳಿದರು.

ಶರಾವತಿ ಹಿನ್ನೀರಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಸುಮಾರು423.15 ಕೋಟಿ ರು. ವೆಚ್ಚದಲ್ಲಿ 2.25 ಕಿ.ಮೀ. ಸೇತುವೆ ನಿರ್ಮಾಣವಾಗುತ್ತಿದ್ದು, ಕಾಮಗಾರಿ ಭರದಿಂದ ನಡೆಯುತ್ತಿದೆ. ಕೇಬಲ್ ಆಧಾರಿತ ಸೇತುವೆ ಇದಾಗಿದ್ದು, ಪ್ರವಾಸಿಗರನ್ನು ಆಕರ್ಷಿಸುವ ಸಾಧ್ಯತೆ ಇದೆ. ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ ಸಾರ್ವಜನಿಕ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ನಾಡಿಗೆ ಬೆಳಕು ನೀಡಲು ತಮ್ಮ ಸರ್ವಸ್ವವನ್ನು ಕಳೆದುಕೊಂಡ ಹಿನ್ನೀರಿನ ಜನರ ಬದುಕು ಹಸನಾಗಬೇಕು. ನಾಡಿಗೆ ಬೆಳಕು ನೀಡಲು ತ್ಯಾಗ ಮಾಡಿದವರ ಹಿತಕಾಯಲು ನಾವು ಬದ್ಧರಾಗಿದ್ದೇವೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿ ಸುವ ಜೊತೆಗೆ ಇದರಿಂದ ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನಕ್ಕೆ ರಾಜ್ಯ ಮತ್ತು ಹೊರ ರಾಜ್ಯದಿಂದ ಬರುವ ಭಕ್ತಾದಿಗಳಿಗೆ ಅನುಕೂಲವಾಗಲಿದೆ. ತುರ್ತು ಸಂದರ್ಭದಲ್ಲಿ ಸಾಗರ ಕೇಂದ್ರಕ್ಕೆ ಹೋಗಲು ಸೇತುವೆ ಸ್ಥಳೀಯರಿಗೆ ಹೆಚ್ಚು ಅನುಕೂಲವಾಗಲಿದೆ. ಸೇತುವೆ ನಿರ್ಮಾಣದಿಂದ ನನಗೆ ಸಾರ್ಥಕತೆ ತಂದುಕೊಟ್ಟಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಬಿಜೆಪಿ ಸ್ಥಳೀಯ ಪ್ರಮುಖರು ಹಾಜರಿದ್ದರು.