ಸಾರಾಂಶ
ತುಮ್ಮರಗುದ್ದಿ ಗ್ರಾಮದ ಹಿರಿಯ ಜಾನಪದ ಸಂಗೀತ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರೆಪ್ಪ ಮಾರೆಪ್ಪ ದಾಸರ ಅವರಿಗೆ ಬೆಂಗಳೂರಿನಲ್ಲಿ ಬುಧವಾರ ರಾಜ್ಯ ಸರ್ಕಾರದಿಂದ ನೀಡಲ್ಪಟ್ಟ ಜಾನಪದಶ್ರೀ ಪ್ರಶಸ್ತಿಯನ್ನು ಸಿಎಂ ಸಿದ್ದರಾಮಯ್ಯ, ಕನ್ನಡ-ಸಂಸ್ಕೃತಿ ಇಲಾಖೆ ಸಚಿವರು ಪ್ರದಾನಿಸಿದರು.
ಯಲಬುರ್ಗಾ: ತಾಲೂಕಿನ ತುಮ್ಮರಗುದ್ದಿ ಗ್ರಾಮದ ಹಿರಿಯ ಜಾನಪದ ಸಂಗೀತ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರೆಪ್ಪ ಮಾರೆಪ್ಪ ದಾಸರ ಅವರಿಗೆ ಬೆಂಗಳೂರಿನಲ್ಲಿ ಬುಧವಾರ ರಾಜ್ಯ ಸರ್ಕಾರದಿಂದ ನೀಡಲ್ಪಟ್ಟ ಜಾನಪದಶ್ರೀ ಪ್ರಶಸ್ತಿಯನ್ನು ಸಿಎಂ ಸಿದ್ದರಾಮಯ್ಯ, ಕನ್ನಡ-ಸಂಸ್ಕೃತಿ ಇಲಾಖೆ ಸಚಿವರು ಪ್ರದಾನಿಸಿದರು.ತುಮ್ಮರಗುದ್ದಿ ಗ್ರಾಮದ ಹಿರಿಯ ಜಾನಪದ ಸಂಗೀತ ಕಲಾವಿದ ಮಾರೆಪ್ಪ ಮಾರೆಪ್ಪ ದಾಸರ ಜಾನಪದ ಕ್ಷೇತ್ರದಲ್ಲಿ ತಮ್ಮ ಇಂಪಾದ ಧ್ವನಿಯಿಂದ ಅನೇಕ ಕಡೆಗಳಲ್ಲಿ ಸಂಗೀತ ಪ್ರದರ್ಶನ ಮಾಡಿದವರು. ತಮ್ಮ ಕಂಠದಲ್ಲಿ ಜಾನಪದ, ತತ್ವಪದ, ಹಂತಿಪದ, ವಚನ ಸಂಗೀತ, ಶರೀಫರ ಹಾಡುಗಳ ಮೂಲಕ ಗುರುತಿಸಿಕೊಂಡವರು. ಮಾರೆಪ್ಪ ಅವರಿಗೆ ಜಾನಪದ ಗುರುತಿಸಿ ರಾಜ್ಯ ಸರ್ಕಾರ ಜೊತೆಗೆ ಹಲವು ಸಂಘ ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿದೆ.ಜೀವಮಾನದ ಸಾಧನೆ ಗುರುತಿಸಿ ರಾಜ್ಯ ಸರ್ಕಾರ ೨೦೨೧-೨೧ನೇ ಸಾಲಿನ ಜನಪದ ಶ್ರೀ ಪ್ರಶಸ್ತಿ ನೀಡಲಾಯಿತು.ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಇದ್ದರು.