ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ತುಂಗಭದ್ರಾ ನದಿ ನೀರು- ಗಾಲಿ ಜನಾರ್ದನ ರೆಡ್ಡಿ

| Published : Dec 23 2023, 01:46 AM IST

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ತುಂಗಭದ್ರಾ ನದಿ ನೀರು- ಗಾಲಿ ಜನಾರ್ದನ ರೆಡ್ಡಿ
Share this Article
  • FB
  • TW
  • Linkdin
  • Email

ಸಾರಾಂಶ

ಅಂಜನಾದ್ರಿ ದಿನದಿಂದ ದಿನಕ್ಕೆ ಅಭಿವೃದ್ಧಿ ಸಾಧಿಸುತ್ತದೆ. ಇದಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು. ರಾಜ್ಯ ಸರ್ಕಾರ ಕೂಡ ಇದಕ್ಕೆ ಕೈಜೋಡಿಸಬೇಕು. ಈಗಾಗಲೇ ಅಂಜನಾದ್ರಿ ಅಭಿವೃದ್ಧಿಗೆ ತಾವು ಹೆಚ್ಚು ಒತ್ತು ನೀಡಿದ್ದು, ಬರುವ ದಿನಗಳಲ್ಲಿ ಭಕ್ತರಿಗೆ ಮೂಲಸೌಕರ್ಯ, ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ

ಗಂಗಾವತಿ: ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆಗೆ ಅಂಜನಾದ್ರಿ ಬಳಿ ಹರಿಯುತ್ತಿರುವ ತುಂಗಭದ್ರಾ ನದಿಯ ನೀರನ್ನು 108 ಲೋಹದ ಕುಂಭದೊಂದಿಗೆ ಒಯ್ದು ಶ್ರೀರಾಮಚಂದ್ರ ದೇವರಿಗೆ ಅಭಿಷೇಕ ಮಾಡಲಾಗುತ್ತದೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ನಗರದಲ್ಲಿ ಹನುಮದ್ ವ್ರತ ಅಂಗವಾಗಿ ಏರ್ಪಡಿಸಿದ್ದ ಹನಮಮಾಲಾಧಾರಿಗಳ ಸಂಕೀರ್ತನೆ ಯಾತ್ರೆಯಲ್ಲಿ ಪಾಲ್ಗೊಂಡು ಪತ್ರಕರ್ತರೊಂದಿಗೆ ಅವರು ಮಾತನಾಡಿದರು.

ಜ.22ರಂದು ನಡೆಯುವ ಅಯೋಧ್ಯೆ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಶ್ರೀರಾಮಚಂದ್ರ ದೇವರ ಶಿಷ್ಯನಾದ ಅಂಜನಾದ್ರಿ ಹನುಮಂತ ದೇವರ ಸನ್ನಿಧಾನದಲ್ಲಿ ಹರಿಯುತ್ತಿರುವ ತುಂಗಭದ್ರೆಯ ಜಲವನ್ನು ಲೋಹದ 108 ಕುಂಭದೊಂದಿಗೆ ತೆರೆಳಿ ಅಭಿಷೇಕ ಮಾಡಲಾಗುತ್ತದೆ. ಸ್ವತಃ ತಾವೇ ಭಾಗಿಯಾಗುವುದಾಗಿ ಶಾಸಕರು ತಿಳಿಸಿದರು.

ಅಯೋಧ್ಯೆ ಪ್ರದೇಶದ ಭಕ್ತರು ಅಂಜನಾದ್ರಿಗೆ ಬರುತ್ತಿದ್ದಾರೆ. ಅದರಂತೆ ಈ ಭಾಗದ ಭಕ್ತರು ಅಯೋಧ್ಯೆಗೆ ತೆರಳಲು ಕೇಂದ್ರ ಮತ್ತು ರಾಜ್ಯ ಸರ್ಕಾರವು ಅನುಕೂಲ ಮಾಡಿಕೊಡಬೇಕೆಂದರು.

ಅಂಜನಾದ್ರಿ ದಿನದಿಂದ ದಿನಕ್ಕೆ ಅಭಿವೃದ್ಧಿ ಸಾಧಿಸುತ್ತದೆ. ಇದಕ್ಕೆ ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು. ರಾಜ್ಯ ಸರ್ಕಾರ ಕೂಡ ಇದಕ್ಕೆ ಕೈಜೋಡಿಸಬೇಕು. ಈಗಾಗಲೇ ಅಂಜನಾದ್ರಿ ಅಭಿವೃದ್ಧಿಗೆ ತಾವು ಹೆಚ್ಚು ಒತ್ತು ನೀಡಿದ್ದು, ಬರುವ ದಿನಗಳಲ್ಲಿ ಭಕ್ತರಿಗೆ ಮೂಲಸೌಕರ್ಯ, ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ವಿಪ ಮಾಜಿ ಸದಸ್ಯ ಎಚ್.ಆರ್. ಶ್ರೀನಾಥ, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ ಇದ್ದರು.