ಬೆಂಗಳೂರಿನ ಸಮಸ್ಯೆಗಳನ್ನು ಪರಿಹಾರಿಸಲು ಸುರಂಗ ರಸ್ತೆ ಅಭಿವೃದ್ಧಿ: ಡಿಸಿಎಂ

| Published : Nov 20 2024, 01:17 AM IST

ಬೆಂಗಳೂರಿನ ಸಮಸ್ಯೆಗಳನ್ನು ಪರಿಹಾರಿಸಲು ಸುರಂಗ ರಸ್ತೆ ಅಭಿವೃದ್ಧಿ: ಡಿಸಿಎಂ
Share this Article
  • FB
  • TW
  • Linkdin
  • Email

ಸಾರಾಂಶ

ಬೆಂಗಳೂರಿನಲ್ಲಿ ಹಲವು ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕೆ ಸರ್ಕಾರ ಶ್ರಮಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ತಂತ್ರಜ್ಞಾನ ಶೃಂಗದಲ್ಲಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ದೇಶದ ನೀತಿ ಆಯೋಗದ ಆವಿಷ್ಕಾರ ಸೂಚ್ಯಂಕದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಐಟಿ-ಬಿಟಿ, ನವೋದ್ಯಮ ಕ್ಷೇತ್ರದಲ್ಲಿ ಕರ್ನಾಟಕ ತನ್ನದೇ ಛಾಪು ಮೂಡಿಸಿದೆ. ಬೆಂಗಳೂರನ್ನು ದೇಶದ ತಂತ್ರಜ್ಞಾನ ವಲಯದ ಹೃದಯ ಎಂದೇ ಕರೆಯಲಾಗುತ್ತದೆ. ದೆಹಲಿ, ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಪೇಟೆಂಟ್‌ ವಿಚಾರದಲ್ಲಿ ಮುಂಚೂಣಿಯಲ್ಲಿದೆ ಎಂದರು.

ಐಟಿ-ಬಿಟಿ ಇಲಾಖೆಯಿಂದ ಬೆಂಗಳೂರು ಅರಮನೆಯಲ್ಲಿ ಏರ್ಪಡಿಸಲಾಗಿರುವ ಮೂರು ದಿನಗಳ 27ನೇ ಆವೃತ್ತಿಯ ‘ಬೆಂಗಳೂರು ತಂತ್ರಜ್ಞಾನ ಶೃಂಗ-24’ವನ್ನು ಮಂಗಳವಾರ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಅವುಗಳಿಗೆ ಶಾಶ್ವತ ಪರಿಹಾರ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಸುರಂಗ ರಸ್ತೆ, ಬ್ಯುಸಿನೆಸ್‌ ಕಾರಿಡಾರ್‌ಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಈ ಯೋಜನೆಗಳ ಮೂಲಕ ನಗರದ ಸಂಚಾರ ದಟ್ಟಣೆಗೆ ಪರಿಹಾರ ದೊರೆಯಲಿದೆ. ಉಳಿದ ಸಮಸ್ಯೆಗಳನ್ನೂ ಗಮನಿಸಿ ಅದಕ್ಕೆ ಪರಿಹಾರ ನೀಡುವ ಮೂಲಕ ಐಟಿ-ಬಿಟಿ ಸೇರಿದಂತೆ ಇನ್ನಿತರ ಉದ್ಯಮ ಸ್ನೇಹಿ ನಗರವನ್ನಾಗಿ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರಿಯಾಂಕ್‌ ಖರ್ಗೆ ಮಾತನಾಡಿ, ಬೆಂಗಳೂರು ರೈಸಿಂಗ್ ವರದಿಯು ಬೆಂಗಳೂರಿನ ಬಗ್ಗೆ ಅರಿಯಲು ಸಹಕಾರಿಯಾಗಿದೆ. ಭವಿಷ್ಯದಲ್ಲಿ ಬೆಂಗಳೂರು ಮತ್ತಷ್ಟು ಅಭಿವೃದ್ಧಿ ಹೊಂದಲು ಇದು ಸಹಕಾರಿಯಾಗಲಿದೆ. ಬೆಂಗಳೂರಿನ ಯಶಸ್ಸು, ಮುಂದಿನ ಸವಾಲುಗಳು, ಅವಕಾಶಗಳ ಬಗ್ಗೆಯೂ ವರದಿಯಲ್ಲಿ ಯಲ್ಲೇಖಿಸಲಾಗಿದೆ. ಈ ವರದಿಗೆ ಹಲವು ಮೂಲಗಳಿಂದ ಮಾಹಿತಿ ಸಂಗ್ರಹಿಸಲಾಗಿದ್ದು, ಸರ್ಕಾರ, ಡಿಜಿಟಲ್‌ ಪ್ಲಾಟ್‌ಫಾರ್ಮ್‌ ಸೇರಿದಂತೆ 170ಕ್ಕೂ ಹೆಚ್ಚಿನ ಮೂಲಗಳಿಂದ ಮಾಹಿತಿ ಸಂಗ್ರಹಿಸಿ ದಾಖಲಿಸಲಾಗಿದೆ ಎಂದರು.