ಕನ್ನಡಪ್ರಭ ವಾರ್ತೆ ಬೆಳಗಾವಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ, ₹70 ಸಾವಿರ ಮೌಲ್ಯದ 1.346 ಕೆ.ಜಿ ಗಾಂಜಾ ಹಾಗೂ ₹1 ಲಕ್ಷ ಮೌಲ್ಯದ ಬೈಕ್ ವಶಪಡಿಸಿಕೊಂಡಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಳಗಾವಿಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ, ₹70 ಸಾವಿರ ಮೌಲ್ಯದ 1.346 ಕೆ.ಜಿ ಗಾಂಜಾ ಹಾಗೂ ₹1 ಲಕ್ಷ ಮೌಲ್ಯದ ಬೈಕ್ ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಟಿಳಕವಾಡಿ ಶಿವಾಜಿ ಕಾಲನಿ ನಿವಾಸಿ ಕೃಷ್ಣ ಗಜಾನನ ಪಾಟೀಲ (24) ಹಾಗೂ ಶಹಾಪುರದ ನವಿ ಗಲ್ಲಿ ನಿವಾಸಿ ರೂಪೇಶ ಸುಧೀರ ಶಿಂಧೆ (26) ಎಂದು ಗುರುತಿಸಲಾಗಿದೆ.ಅ.12ರಂದು ಸಿಸಿಬಿ ಪಿಐ ಮಂಜುನಾಥ ನಾಯಕ್ ಅವರಿಗೆ ದೊರೆತ ಖಚಿತ ಮಾಹಿತಿ ಆಧರಿಸಿ, ಮೇಲಧಿಕಾರಿಗಳ ಮಾರ್ಗದರ್ಶನದಲ್ಲಿ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಟಾ ಗ್ರೌಂಡ್, ಅನಗೋಳ-ವಡಗಾವಿ ರಸ್ತೆ, ಸಂತಮೀರಾ ಶಾಲೆ ಸಮೀಪದ ಭಾಗ್ಯನಗರ 5ನೇ ಕ್ರಾಸ್ ಬಳಿ ದಾಳಿ ನಡೆಸಲಾಯಿತು.ಈ ವೇಳೆ ಆರೋಪಿಗಳು ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ದಾಳಿ ವೇಳೆ ₹70 ಸಾವಿರ ಮೌಲ್ಯದ 1.346 ಕೆ.ಜಿ ಗಾಂಜಾ ಹಾಗೂ ₹1 ಲಕ್ಷ ಮೌಲ್ಯದ ಕಪ್ಪು ಬಣ್ಣದ ಬಜಾಜ್ ಪಲ್ಸರ್ ಎನ್ಎಸ್-125 ಬೈಕ್ ಸೇರಿದಂತೆ ಒಟ್ಟು ₹1.70 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.ವಿಚಾರಣೆ ವೇಳೆ ಆರೋಪಿಗಳು ಗಾಂಜಾವನ್ನು ಖಾನಾಪುರದ ವಿನು ಎಂಬಾತನಿಂದ ತರಿಸಿಕೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ತಿಲಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ 3ನೇ ಆರೋಪಿಯ ಪತ್ತೆಗಾಗಿ ತನಿಖೆ ಮುಂದುವರಿದಿದೆ.
