ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರ ಸೆರೆ

| Published : Nov 07 2024, 12:30 AM IST

ಸಾರಾಂಶ

ಭದ್ರಾವತಿ: ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಸಿಇಎನ್ ಪೊಲೀಸರು ಬಂಧಿಸಿ ೪ ಕೆ.ಜೆ ೪೬೧ ಗ್ರಾಂ. ಗಾಂಜಾ ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಬಿಳಿಕಿ ಕ್ರಾಸ್‌ನಲ್ಲಿ ನಡೆದಿದೆ.

ಭದ್ರಾವತಿ: ಗಾಂಜಾ ಮಾರಾಟದಲ್ಲಿ ತೊಡಗಿದ್ದ ಇಬ್ಬರನ್ನು ಸಿಇಎನ್ ಪೊಲೀಸರು ಬಂಧಿಸಿ ೪ ಕೆ.ಜೆ ೪೬೧ ಗ್ರಾಂ. ಗಾಂಜಾ ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಬಿಳಿಕಿ ಕ್ರಾಸ್‌ನಲ್ಲಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೊಲೀಸರು ಗಾಂಜಾ ಮಾರಾಟದಲ್ಲಿ ತೊಡಗಿದ್ದ ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ ನಿವಾಸಿ ಮೊಹಮ್ಮದ್ ಅಕ್ರಂ(೨೬) ಮತ್ತು ಸತ್ಯಸಾಯಿ ನಗರದ ನಿವಾಸಿ ಅಬ್ದುಲ್ ರಜಾಕ್ (೩೫) ಇಬ್ಬರನ್ನು ಬಂಧಿಸಿ ಸುಮಾರು ೧.೪೦ ಲಕ್ಷ ರು. ಮೌಲ್ಯದ ೪ ಕೆ.ಜಿ ೪೬೧ ಗ್ರಾಂ. ತೂಕದ ಒಣ ಗಾಂಜಾ ಮತ್ತು ಸುಮಾರು ೩ ಸಾವಿರ ರು. ಮೌಲ್ಯದ ಮೊಬೈಲ್ ಹಾಗೂ ಸುಮಾರು ೭೦ ಸಾವಿರ ರು. ಮೌಲ್ಯದ ದ್ವಿಚಕ್ರ ವಾಹನ ಸೇರಿ ಒಟ್ಟು ೨.೧೩ ಲಕ್ಷ ರು. ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿಗಳಾದ ಅನಿಲ್ ಕುಮಾರ್ ಭೂಮರಡ್ಡಿ ಮತ್ತು ಎ.ಜಿ ಕಾರಿಯಪ್ಪ ಮಾರ್ಗದರ್ಶನದಲ್ಲಿ ಸಿಇಎನ್ ಪೊಲೀಸ್ ಠಾಣೆ ಕೆ.ಕೃಷ್ಣಮೂರ್ತಿ ಮೇಲ್ವಿಚಾರಣೆಯಲ್ಲಿ ಪೊಲೀಸ್ ನಿರೀಕ್ಷಕ ಪಿ.ಐ.ಮಂಜುನಾಥ್ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.