ಸಾರಾಂಶ
ತಾಲೂಕಿನ ಮಹದೇಶ್ವರ ಬೆಟ್ಟದ ಸಮೀಪ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಮಹದೇಶ್ವರಬೆಟ್ಟದ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹನೂರು: ತಾಲೂಕಿನ ಮಹದೇಶ್ವರ ಬೆಟ್ಟದ ಸಮೀಪ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಮಹದೇಶ್ವರಬೆಟ್ಟದ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಮೂಲದ ರಾಜರಾಜೇಶ್ವರಿ ನಗರದ ಅಭಿಷೇಕ್ (23), ಮಳವಳ್ಳಿಯ ಹಲಗೂರು ಮೂಲದ ಪ್ರಜ್ವಲ್(21) ಬಂಧಿತರಾಗಿದ್ದಾರೆ. ಮಾರಾಟ ಮಾಡುವ ಸಲುವಾಗಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಮಹದೇಶ್ವರಬೆಟ್ಟ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜಗದೀಶ್ ನೇತೃತ್ವದ ತಂಡ ದಾಳಿ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತರಿಂದ 180 ಗ್ರಾಂ ಹೂಬಿಟ್ಟ ಬೀಜ ಮಿಶ್ರಿತ ಒಣ ಗಾಂಜಾ ಸೇರಿ ಆರೋಪಿಗಳನ್ನು ವಶಕ್ಕೆ ಪಡೆದು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರಕರಣ ಕಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.