ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿನಗರದ ವಿವಿಧೆಡೆ ನಡೆದ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಟಿಳಕವಾಡಿ ಪೊಲೀಸರು ಇಬ್ಬರುಆರೋಪಿಗಳನ್ನು ಬಂಧಿಸಿದ್ದಾರೆ.ವೀರಭದ್ರ ನಗರದ ನಿವಾಸಿ ಹೈದರ್ ಅಲಿ ಮುಸ್ಲಿಂ ಅಲಿ ಶೇಖ್ ಮತ್ತು ಅಮನ್ ನಗರ ನಿವಾಸಿ ನದೀಮ್ ಶಮ್ಸುದ್ದಿನ್ ಟೋಪಿಗಾರ್ ಬಂಧಿತ ಆರೋಪಿಗಳು. ಇವರಿಬ್ಬರು ಟಿಳಕವಾಡಿ ಮತ್ತು ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಿಧ ಕಡೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳುವು ಮಾಡಿದ್ದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ವಿವಿಧೆಡೆ ನಡೆದ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಟಿಳಕವಾಡಿ ಪೊಲೀಸರು ಇಬ್ಬರುಆರೋಪಿಗಳನ್ನು ಬಂಧಿಸಿದ್ದಾರೆ.ವೀರಭದ್ರ ನಗರದ ನಿವಾಸಿ ಹೈದರ್ ಅಲಿ ಮುಸ್ಲಿಂ ಅಲಿ ಶೇಖ್ ಮತ್ತು ಅಮನ್ ನಗರ ನಿವಾಸಿ ನದೀಮ್ ಶಮ್ಸುದ್ದಿನ್ ಟೋಪಿಗಾರ್ ಬಂಧಿತ ಆರೋಪಿಗಳು. ಇವರಿಬ್ಬರು ಟಿಳಕವಾಡಿ ಮತ್ತು ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಿಧ ಕಡೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳುವು ಮಾಡಿದ್ದರು. ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ, ಅವರಿಂದ ₹ 7 ಲಕ್ಷ ಮೌಲ್ಯದ 10 ಬೈಕ್ ಜಪ್ತಿ ಮಾಡಲಾಗಿದೆ. ಈ ಕುರಿತು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ