ಸಾರಾಂಶ
ಬೆಳಗಾವಿ: ನಗರದ ವಿವಿಧ ಕಡೆಗಳಲ್ಲಿ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ, ₹6.07ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ.
ಬೆಳಗಾವಿ: ನಗರದ ವಿವಿಧ ಕಡೆಗಳಲ್ಲಿ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ, ₹6.07ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ.
₹5,54,400 ಮೌಲ್ಯದ 77 ಗ್ರಾಂ ಚಿನ್ನಾಭರಣ, ₹20 ಸಾವಿರ ಮೌಲ್ಯದ 200 ಗ್ರಾಂ ಬೆಳ್ಳಿಯ ಆಭರಣ, ₹20 ಸಾವಿರ ಮೌಲ್ಯದ ಲ್ಯಾಪ್‌ಟಾಪ್, ₹3 ಸಾವಿರ ಮೌಲ್ಯದ ಮೊಬೈಲ್ ಹಾಗೂ ₹10 ಸಾವಿರ ನಗದು ಸೇರಿದಂತೆ ಒಟ್ಟು ₹6.07 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ. ನಗರದ ಕ್ಯಾಂಪ್, ಖಡೇಬಜಾರ ಹಾಗೂ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವಾಪ್ತಿಯಲ್ಲಿ ನಡೆದ ಮನೆಗಳ್ಳತನ ನಡೆದಿದ್ದವು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಕಳ್ಳರ ಪತ್ತೆಗೆ ಬಲೆಬೀಸಿದ್ದರು.