ಸಾರಾಂಶ
ಮೇಕೆದಾಟು ಯೋಜನೆ ಹಾಗೂ ಮಹಾದಾಯಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಮಾ. 21ರಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದಿಂದ ರಾಮನಗರ ಜಿಲ್ಲೆಯಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ವೆಂಕಟೇಶ ಬೇಲೂರ ಹೇಳಿದರು.
ಗದಗ: ಮೇಕೆದಾಟು ಯೋಜನೆ ಹಾಗೂ ಮಹಾದಾಯಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಮಾ. 21ರಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದಿಂದ ರಾಮನಗರ ಜಿಲ್ಲೆಯಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ವೆಂಕಟೇಶ ಬೇಲೂರ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕನಕಪುರ ತಾಲೂಕಿನ ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡವಾಗಿ ನಿರ್ಮಿಸಲು ಉದ್ದೇಶಿರುವ ಮೇಕೆದಾಟು ಅಣೆಕಟ್ಟು ಯೋಜನೆ ಜಾರಿಗೆ ಆಗ್ರಹಿಸಲಾಗುತ್ತದೆ. ರಾಮನಗರದ ಕೆಂಪೇಗೌಡ ವೃತ್ತದಿಂದ ಆರಂಭವಾಗಲಿರುವ ಪಾದಯಾತ್ರೆಯು ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಯೋಜನೆ ಜಾರಿಗೆ ಆಗ್ರಹಿಸಿ ಹಕ್ಕೊತ್ತಾಯ ಮಾಡಲಾಗುತ್ತದೆ ಎಂದರು.ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿಧಾನಸಭಾ ಚುನಾವಣೆಗೂ ಮುಂಚೆ ಯೋಜನೆ ಜಾರಿಗಾಗಿ ಮೇಕೆದಾಟುವಿನಿಂದ ಬೆಂಗಳೂರಿನವರಿಗೆ ಪಾದಯಾತ್ರೆ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. ನಂತರ ಅವರದೇ ಪಕ್ಷದ ಸರಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ ಇದುವರಿಗೂ ಯೋಜನೆ ಜಾರಿ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಕಮೀಟಿ ಹಾಗೂ ಸರ್ವ ಜಿಲ್ಲಾ ಘಟಕದಿಂದ ಪಾದಯಾತ್ರೆಯಲ್ಲಿ ಭಾಗವಹಿಸಿಲಿದ್ದಾರೆ. ಜಿಲ್ಲೆಯಿಂದ ಸುಮಾರು 300 ಜನ ಕಾರ್ಯಕರ್ತರು ಭಾಗವಹಿಸುತ್ತಾರೆ. ಮಾ. 22ರಂದು ವಿಧಾನಸಭೆ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಮಂಜುನಾಥ, ಪರಶುರಾಮ, ದಾವಲಸಾಬ ಮುಳಗುಂದ, ಶ್ರೀನಿವಾಸ ಭಂಡಾರಿ, ತಿಮ್ಮಣ್ಣ ಡೋಣಿ, ಮಂಜುನಾಥ, ಸಹದೇವ, ಹನುಮಂತ ಸೇರಿದಂತೆ ಇತತರು ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))