ಸಾರಾಂಶ
ನ.24ರಂದು ಬೆಳಗ್ಗೆ 10 ಗಂಟೆಗೆ ವಿಚಾರ ಸಂಕಿರಣವನ್ನು ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ.ವೊಡೇ ಪಿ.ಕೃಷ್ಣ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸ್ಥೆ ಗೌರವ ಕಾರ್‍ಯದರ್ಶಿ ಕೆ.ವಿ.ಬಸವರಾಜು ಪ್ರಾಸ್ತಾವಿಕ ನುಡಿ ನುಡಿಯಲಿದ್ದಾರೆ.
ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ವಿದ್ಯಾ ಪ್ರಚಾರ ಸಂಘದ ವಿಜಯ ಪ್ರಥಮ ದರ್ಜೆ ಕಾಲೇಜಿನ ಮತ್ತು ವಿಜಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ನ.24 ಮತ್ತು 25ರಂದು ಎರಡು ದಿನಗಳ ರಾಜ್ಯಮಟ್ಟದ ವಿಚಾರ ಸಂಕಿರಣ ನಡೆಯಲಿದೆ ಎಂದು ಸಂಸ್ಥೆ ಅಧ್ಯಕ್ಷ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು.ವಿಜಯ ಕಾಲೇಜಿನ ಡಾ.ಎಂ.ಎಸ್.ಕೃಷ್ಣಕುಮಾರ್ ಸಭಾಂಗಣದಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಕರ್ನಾಟಕ ರಾಜ್ಯ ಪತ್ರಗಾರ ಇಲಾಖೆ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನೆ, ಎಸ್‌ಟಿಜಿ ಪ್ರಥಮ ದರ್ಜೆ ಕಾಲೇಜು ಚಿನಕುರಳಿ, ಪ್ರಥಮ ದರ್ಜೆ ಕಾಲೇಜುಗಳ ಇತಿಹಾಸ ಅಧ್ಯಾಪಕರ ಸಂಘದ ಮತ್ತು ಬಿಇಡಿ ಕಾಲೇಜಿನ ಅಧ್ಯಾಪಕರ ಸಂಘ ಮತ್ತು ವಿಶ್ವವಿದ್ಯಾನಿಲಯ ಮಂಡ್ಯ ಆಶ್ರಯದಲ್ಲಿ ಮರಳಿ ಮನಕೆ- ಗಾಂಧಿ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಚಿಂತನೆಗಳ ಪ್ರಸ್ತುತಿ ಕುರಿತು ವಿಚಾರ ಸಂಕೀರಣ ನಡೆಯಲಿದೆ ಎಂದರು.
ನ.24ರಂದು ಬೆಳಗ್ಗೆ 10 ಗಂಟೆಗೆ ವಿಚಾರ ಸಂಕಿರಣವನ್ನು ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ನಾಡೋಜ ಡಾ.ವೊಡೇ ಪಿ.ಕೃಷ್ಣ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸ್ಥೆ ಗೌರವ ಕಾರ್‍ಯದರ್ಶಿ ಕೆ.ವಿ.ಬಸವರಾಜು ಪ್ರಾಸ್ತಾವಿಕ ನುಡಿ ನುಡಿಯಲಿದ್ದಾರೆ ಎಂದರು.ರಾಜ್ಯ ಪತ್ರಗಾರ ಇಲಾಖೆ ನಿರ್ದೇಶಕ ಡಾ.ಗವಿಸಿದ್ದಯ್ಯ ಆಶಯ ಭಾಷಣ ಮಾಡಲಿದ್ದಾರೆ. ಮಂಡ್ಯ ವಿವಿ ಕುಲಪತಿ ಪ್ರೊ.ಕೆ.ಶಿವಚಿತ್ತಪ್ಪ, ಎಚ್.ಸಿ.ದಾಸಪ್ಪ ಸಾರ್ವಜನಿಕ ವಿಚಾರ ಸಂಸ್ಥೆ ಕಾರ್‍ಯದರ್ಶಿ ಸರೋಜಮ್ಮ, ರಾಜ್ಯ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ.ಪ್ರತಾಪ್‌ಲಿಂಗಯ್ಯ, ಗಾಂಧಿ ಸ್ಮಾರಕ ಕಾರ್‍ಯದರ್ಶಿ ಎಂ.ಸಿ.ನರೇಂದ್ರ, ಡಾ.ಎಂ.ಬಿ.ಪ್ರಮೀಳಾ ಸೇರಿದಂತೆ ಸಂಸ್ಥೆ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ.
ಮೊದಲ ದಿನ ಎರಡು ಹಾಗೂ ಎರಡನೇ ದಿನ ಎರಡು ವಿಚಾರ ಗೋಷ್ಠಿಗಳು ನಡೆಯಲಿವೆ. ನ.25ರಂದು ಮಧ್ಯಾಹ್ನ ನಡೆಯುವ ಸಮಾರೋಪದಲ್ಲಿ ಬೆಂಗಳೂರಿನ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರಿ ನಿಶ್ಚಲಾನಂದನಾಥ ಮಹಾಸ್ವಾಮೀಜಿ ಸಮಾರೋಪ ಭಾಷಣ ಮಾಡಲಿದ್ದಾರೆ. ಗದಗಿನ ಮಾಜಿ ಶಾಸಕ ಡಿ.ಆರ್.ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಭಾಗೀಯ ಪತ್ರಗಾರ ಕಚೇರಿಯ ಉಪ ನಿರ್ದೇಶಕ ಎಚ್.ಎಲ್.ಮಂಜುನಾಥ್, ಕಲೆಗಾರ ಪ್ರಕಾಶ್ ಚಿಕ್ಕಪಾಳ್ಯ, ಡಾ.ಕೆ.ಚನ್ನಕೃಷ್ಣಯ್ಯ, ಡಾ.ಸುರೇಶ್, ಡಾ.ಮಂಜುಳ, ಡಾ.ನಿಶಾಂತ್ ಎ.ನಾಯ್ದು ಸೇರಿದಂತೆ ಆಡಳಿತ ಮಂಡಳಿ ಹಾಗೂ ಉಪನ್ಯಾಸಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.;Resize=(128,128))
;Resize=(128,128))
;Resize=(128,128))
;Resize=(128,128))