ಬೈಕ್, ಕಾರು ಡಿಕ್ಕಿ: ಇಬ್ಬರು ಸಾವು

| Published : Dec 15 2023, 01:31 AM IST

ಸಾರಾಂಶ

ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ.

ತುಮಕೂರು: ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ.

ಶ್ರೀಧರ್ (28), ಮುನಿರಾಜು(25) ಮೃತ ದುರ್ದೈವಿಗಳು. ಅನಾರೋಗ್ಯದಿಂದ ಬಳಲುತ್ತಿದ್ದ ಮುನಿರಾಜು ಅವರನ್ನು ಶ್ರೀಧರ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಳ್ಳಂಬೆಳ್ಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.