ಸಾರಾಂಶ
ಕುಡಿದ ಮತ್ತಿನಲ್ಲಿ ಇಬ್ಬರು ಕಾರ್ಮಿಕರ ಮಧ್ಯೆ ಉಂಟಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಕುಡಿದ ಮತ್ತಿನಲ್ಲಿ ಇಬ್ಬರು ಕಾರ್ಮಿಕರ ಮಧ್ಯೆ ಉಂಟಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಜಾರ್ಖಂಡ್ ಮೂಲದ ರಾಮು (30) ಕೊಲೆಯಾದ ದುರ್ದೈವಿ. ಈ ಹತ್ಯೆ ಸಂಬಂಧ ಮೃತನ ಸ್ನೇಹಿತ ರಘುನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಇಬ್ಬರೂ ಸ್ನೇಹಿತರು ಹಲವು ದಿನಗಳಿಂದ ವೀರಣ್ಣಪಾಳ್ಯದ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದು, ಆ ಕಟ್ಟಡದ ಆವರಣದಲ್ಲೇ ಅವರು ನೆಲೆಸಿದ್ದರು. ಈ ಕಟ್ಟಡದಲ್ಲಿ ಸೋಮವಾರ ಗ್ರಾನೈಟ್ ಹಾಕುವ ಕೆಲಸದಲ್ಲಿ ರಾಮು ಹಾಗೂ ರಘು ತೊಡಗಿದ್ದರು. ರಾತ್ರಿ ಮದ್ಯ ಸೇವಿಸಿ ಕ್ಷುಲ್ಲಕ ಕಾರಣಕ್ಕೆಇಬ್ಬರ ಮಧ್ಯೆ ಜಗಳವಾಗಿದೆ. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಕೆರಳಿದ ರಘು, ಗೆಳೆಯನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.