ಸಾರಾಂಶ
ದೊಡ್ಡಬಳ್ಳಾಪುರ: 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 73.71 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ಒಂಬತ್ತನೆಯ ಸ್ಥಾನ ಪಡೆದುಕೊಂಡಿದೆ.
ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮೊದಲ ಬಾರಿ ಪರೀಕ್ಷೆ ಎದುರಿಸಿದ 13643 ವಿದ್ಯಾರ್ಥಿಗಳ ಪೈಕಿ 10057 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡ 73.71ರಷ್ಟು ಫಲಿತಾಂಶ ದೊರೆತಿದೆ.ಪರೀಕ್ಷೆಗೆ ಒಟ್ಟು 6803 ಬಾಲಕರು ಹಾಜರಾಗಿದ್ದು, 4576 ಬಾಲಕರು ತೇರ್ಗಡೆಯಾಗುವ ಮೂಲಕ ಶೇ. 67.26
ರಷ್ಟು ಫಲಿತಾಂಶ ಪಡೆದಿದ್ದಾರೆ. 6840 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದು, 5481 ಬಾಲಕಿಯರು ತೇರ್ಗಡೆಹೊಂದುವ ಮೂಲಕ ಶೇ 80.13ರಷ್ಟು ಫಲಿತಾಂಶ ಪಡೆದಿದ್ದಾರೆ. ನಗರ ಪ್ರದೇಶದ 8576 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 6459 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ 75.31ರಷ್ಟು ಫಲಿತಾಂಶ ದೊರೆತಿದೆ. ಗ್ರಾಮೀಣ ಪ್ರದೇಶದ 5067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 3598 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.71ರಷ್ಟು ಫಲಿತಾಂಶ ಸಿಕ್ಕಿದೆ.
ತಾಲೂಕುವಾರು ಫಲಿತಾಂಶ:ದೇವನಹಳ್ಳಿ ತಾಲೂಕಿನಲ್ಲಿ 3255 ವಿದ್ಯಾರ್ಥಿಗಳು ಹಾಜರಾಗಿದ್ದು 2550 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.
78.34ರಷ್ಟು ಫಲಿತಾಂಶ ಪಡೆದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನಲ್ಲಿ 3654 ವಿದ್ಯಾರ್ಥಿಗಳು ಹಾಜರಾಗಿದ್ದು 2561 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 70.08 ರಷ್ಟು ಫಲಿತಾಂಶ ಪಡೆದಿದ್ದಾರೆ. ಹೊಸಕೋಟೆ ತಾಲೂಕಿನಲ್ಲಿ 3625 ವಿದ್ಯಾರ್ಥಿಗಳು ಹಾಜರಾಗಿದ್ದು 2646 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 72.99 ರಷ್ಟು ಫಲಿತಾಂಶ ಪಡೆದಿದ್ದಾರೆ. ನೆಲಮಂಗಲ ತಾಲೂಕಿನಲ್ಲಿ 3109 ವಿದ್ಯಾರ್ಥಿಗಳು ಹಾಜರಾಗಿದ್ದು 2300 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.73.97ರಷ್ಟು ಫಲಿತಾಂಶ ಪಡೆದಿದ್ದಾರೆ.
ಬಾಕ್ಸ್..............(ಫೋಟೋಗಳು ಈ ಬಾಕ್ಸ್‌ಗೆ ಬಳಸಿ)
ಜಿಲ್ಲೆಯ ಇಬ್ಬರು ರಾಜ್ಯಕ್ಕೆ ಟಾಪರ್ಸ್:ದೊಡ್ಡಬಳ್ಳಾಪುರ ತಾಲೂಕಿನ ಮೆಳೇಕೋಟೆ ಕ್ರಾಸ್‌ನಲ್ಲಿರುವ ಎಸ್‌ಜಿಸಿಆರ್ ಶಾಲೆಯ ರಂಜಿತಾ ಎ.ಸಿ ಹಾಗೂ ದೇವನಹಳ್ಳಿ ತಾಲೂಕಿನ ವಿಜಯಪುರ ಹೋಬಳಿಯ ನೀಲಗಿರೇಶ್ವರ ವಿದ್ಯಾನಿಕೇತನ ಪ್ರೌಢಶಾಲೆಯ ವಿದ್ಯಾರ್ಥಿನಿ ಸಿ.ಭಾವನಾ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.
ಕೋಟ್ಸ್..................ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬೆಂ.ಗ್ರಾ ಜಿಲ್ಲೆಗೆ ಉತ್ತಮ ಫಲತಾಂಶ ದೊರೆತಿದ್ದು, ಉತ್ತೀರ್ಣರಾದ ಎಲ್ಲಾ
ಮಕ್ಕಳಿಗೆ, ಶಿಕ್ಷಕ ವೃಂದಕ್ಕೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೂ ಅಭಿನಂದನೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಾಕಷ್ಟು ಸಿದ್ಧತೆಗಳನ್ನು ನಡೆಸಿ ಯಾವುದೇ ಅಡೆತಡೆ ಇಲ್ಲದಂತೆ ಪರೀಕ್ಷೆ ಯಶಸ್ವಿಯಾಗಿ ನಡೆಸಲಾಯಿತು. ಜಿಲ್ಲೆಗೆ ಉತ್ತಮ ಫಲಿತಾಂಶ ಬಂದಿರುವುದು ಸಂತಸ ತಂದಿದೆ.- ಎ.ಬಿ.ಬಸವರಾಜು, ಬೆಂ.ಗ್ರಾ. ಜಿಲ್ಲಾಧಿಕಾರಿ
ಕೋಟ್.............ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿದ್ದು, ಉತ್ತಮ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳಿಗೆ
ಸಾಕಷ್ಟು ತರಬೇತಿ ಕಾರ್ಯಕ್ರಮಗಳು, ಪಠ್ಯಕ್ರಮ, ವಿಶೇಷ ತರಗತಿಗಳು ಏರ್ಪಡಿಸಲಾಗಿತ್ತು. ಇದರಿಂದ ಉತ್ತಮ ಫಲಿತಾಂಶ ಬರಲು ಸಾಧ್ಯವಾಗಿದೆ. ಪಾಸಾದ ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನೆ ಸಲ್ಲಿಸುತ್ತೇನೆ.- ಡಾ.ಕೆ.ಎನ್.ಅನುರಾಧ, ಸಿಇಒ, ಜಿಪಂ
2ಕೆಡಿಬಿಪಿ5-ರಂಜಿತಾ.ಎ.ಸಿ, ಎಸ್‌ಜಿಸಿಆರ್ ಶಾಲೆ, ಮೆಳೇಕೋಟೆ ಕ್ರಾಸ್, ದೊಡ್ಡಬಳ್ಳಾಪುರ.
--2ಕೆಡಿಬಿಪಿ6-
ಸಿ.ಭಾವನಾ, ನೀಲಗಿರೇಶ್ವರ ವಿದ್ಯಾನಿಕೇತನ ಪ್ರೌಢಶಾಲೆ, ವಿಜಯಪುರ.