ಚಿಕ್ಕಮಗಳೂರುಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನಲ್ಲಿ ‘ಸೈಂಟ್ ಮೇರಿಸ್ ನುಡಿ ಗಾಯನ’ ಹೆಸರಿನಲ್ಲಿ ವಿಶಿಷ್ಟ ಕನ್ನಡಾಭಿಮಾನ ಕಾರ್ಯಕ್ರಮವನ್ನು ಸಂಭ್ರಮದಿಂದ ಆಯೋಜಿಸಲಾಯಿತು.
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜಿನಲ್ಲಿ ‘ಸೈಂಟ್ ಮೇರಿಸ್ ನುಡಿ ಗಾಯನ’ ಹೆಸರಿನಲ್ಲಿ ವಿಶಿಷ್ಟ ಕನ್ನಡಾಭಿಮಾನ ಕಾರ್ಯಕ್ರಮವನ್ನು ಸಂಭ್ರಮದಿಂದ ಆಯೋಜಿಸಲಾಯಿತು.ಸುಮಾರು ಒಂದು ಸಾವಿರ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಎಲ್ಲ ಉಪನ್ಯಾಸಕರು ಒಟ್ಟಾಗಿ ಎರಡು ಗಂಟೆಗಳ ಕಾಲ ವಿವಿಧ ಕನ್ನಡ ಗೀತೆಗಳನ್ನು ಸಾಮೂಹಿಕವಾಗಿ ಹಾಡಿದರು. ಚಿಕ್ಕಮಗಳೂರಿನಲ್ಲಿ ಇದೇ ಪ್ರಥಮ ಬಾರಿಗೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಏಕಕಾಲದಲ್ಲಿ ಕನ್ನಡ ಗೀತೆಗಳನ್ನು ಹಾಡಿರುವುದು ಕಾರ್ಯಕ್ರಮದ ವಿಶೇಷತೆಯಾಗಿತ್ತು.ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಕೆಂಪು ಮತ್ತು ಹಳದಿ ಬಣ್ಣದ ಉಡುಪುಗಳನ್ನು ಧರಿಸಿ ಪಾಲ್ಗೊಂಡಿದ್ದು, ಇಡೀ ಕಾಲೇಜು ಆವರಣ ಕನ್ನಡಮಯವಾಗಿ ಕಂಗೊಳಿಸಿತು. ಸಾಮೂಹಿಕ ಗಾಯನದ ಮೂಲಕ ಕನ್ನಡ ಭಾಷೆ, ನಾಡು, ನುಡಿ ಮತ್ತು ಸಂಸ್ಕೃತಿ ಮೇಲಿನ ಅಭಿಮಾನ ಅಭಿವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸ್ಥೆ ಅಧ್ಯಕ್ಷ ಡಾ. ಗ್ರೆಗರಿ ವಿನೋದ್ ಲೋಬೋ ಅವರು, ಒಂದು ಸಾವಿರ ವಿದ್ಯಾರ್ಥಿಗಳು ಒಟ್ಟಾಗಿ ಕನ್ನಡ ಗೀತೆಗಳನ್ನು ಹಾಡಿರುವುದು ಸಂತಸ ಹಾಗೂ ಹೆಮ್ಮೆಯ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಉಪನ್ಯಾಸಕರು ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದರು.ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿ ಬಗ್ಗೆ ಅಭಿಮಾನ ಬೆಳೆಸುವ ಉದ್ದೇಶದೊಂದಿಗೆ ನಡೆದ ‘ಸೈಂಟ್ ಮೇರಿಸ್ ನುಡಿಗಾಯನ’ ಕನ್ನಡ ರಾಜ್ಯೋತ್ಸವದ ಸ್ಮರಣೀಯ ಕಾರ್ಯಕ್ರಮವಾಗಿ ಮೂಡಿಬಂತು.
