ಬಾವಿಗೆ ರಿಂಗ್ ಅಳವಡಿಕೆ ವೇಳೆ ಉಸಿರುಗಟ್ಟಿ ಕಾರ್ಮಿಕರಿಬ್ಬರು ಸಾವು

| Published : Apr 24 2024, 02:27 AM IST

ಬಾವಿಗೆ ರಿಂಗ್ ಅಳವಡಿಕೆ ವೇಳೆ ಉಸಿರುಗಟ್ಟಿ ಕಾರ್ಮಿಕರಿಬ್ಬರು ಸಾವು
Share this Article
  • FB
  • TW
  • Linkdin
  • Email

ಸಾರಾಂಶ

ಪಡಿಬಾಗಿಲಿನಲ್ಲಿ ಸುಮಾರು 30 ಫೀಟ್ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಕೆಳಗಿಳಿದಾಗ ಆಕ್ಸಿಜನ್‌ ಸಿಗದೆ ಮೃತಪಟ್ಟಿದ್ದಾರೆ.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಬಾವಿಗೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೆ ಕಾರ್ಮಿಕರಿಬ್ಬರು ಮೃತಪಟ್ಟ ಘಟನೆ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ. ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(೪೦) ಮತ್ತು ಮಲಾರ್ ನಿವಾಸಿ ಆಲಿ (೨೪) ಮೃತರು.

ಪಡಿಬಾಗಿಲಿನಲ್ಲಿ ಸುಮಾರು 30 ಫೀಟ್ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಓರ್ವ ಕಾರ್ಮಿಕ ಬಾವಿಗಿಳಿದಿದ್ದ. ಕೆಳಗಿಳಿದಾತ ಮೇಲೆ ಬರಲಾರದೆ ಚಡಪಡಿಸುತ್ತಿರುವುದನ್ನು ಕಂಡ ಮತ್ತೊಬ್ಬ ಕಾರ್ಮಿಕನು ಆತನನ್ನು ಮೇಲಕ್ಕೆತ್ತಲೆಂದು ಕೆಳಗಿಳಿದಿದ್ದಾನೆ. ಈ ವೇಳೆ ಆಕ್ಸಿಜನ್‌ ಸಿಗದೆ ಇಬ್ಬರೂ ಉಸಿರು ಗಟ್ಟಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ನಂತರ ಸ್ಥಳೀಯರ ಸಹಾಯದಿಂದ ಫ್ರೆಂಡ್ಸ್ ವಿಟ್ಲ ಮುರಳೀಧರ ನೇತೃತ್ವದ ತಂಡ ಎರಡು ಶವಗಳನ್ನು ಮೇಲಕ್ಕೆತ್ತಿದ್ದಾರೆ. ಮೃತದೇಹಗಳನ್ನು ವಿಟ್ಲ ಸಮುದಾಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಇಬ್ರಾಹಿಂ ಕಳೆದ ಇಪ್ಪತ್ತು ವರ್ಷದಿಂದ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.