ಕನ್ನಡಪ್ರಭ ವಾರ್ತೆ ಬೇಲೂರುಮಂತ್ರಾಲಯದ ಬಳಿ ಭೀಕರ ಅಪಘಾತ ಸಂಭವಿಸಿದ ನಂತರ ಸಾವಿನ ಸಂಖ್ಯೆ 9ಕ್ಕೆ ಏರಿದ್ದು ಈ ಮೊದಲೇ ದುಃಖದಲ್ಲಿದ್ದ ಕುಟುಂಬಕ್ಕೆ ಮತ್ತೆ ಅಘಾತ ಉಂಟಾಗಿದ್ದು ಶೆಟ್ಟಿಗೆರೆ ಗ್ರಾಮದಲ್ಲಿ ಸೂತಕದ ಛಾಯೆ ಮಡುಗಟ್ಟಿದೆ.ರಸ್ತೆ ಅಪಘಾತ ಪ್ರಕರಣದಲ್ಲಿ ಗಾಯಗೊಂಡಿದ್ದ ಇನ್ನಿಬ್ಬರು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದರಿಂದ ಮೃತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಈ ದುರ್ಘಟನೆ ತಾಲೂಕಿನ ಶೆಟ್ಟಿಗೆರೆ ಗ್ರಾಮದ ಒಂದೇ ಕುಟುಂಬವನ್ನು ಕಣ್ಣೀರಿನಲ್ಲಿ ಮುಳುಗಿಸಿದ್ದು, ಇಡೀ ಗ್ರಾಮವೇ ಶೋಕಸಾಗರದಲ್ಲಿ ತೇಲುತ್ತಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಜಯಮ್ಮ (65) ಮತ್ತು ಶುಭ (35) ಅವರು ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕೊನೆಯುಸಿರೆಳೆದಿದ್ದಾರೆ. ಇಬ್ಬರೂ ಶೆಟ್ಟಿಗೆರೆ ಗ್ರಾಮದವರಾಗಿದ್ದು, ಈ ದುರ್ಘಟನೆ ಗ್ರಾಮಕ್ಕೆ ಮತ್ತಷ್ಟು ದುಃಖವನ್ನುಂಟುಮಾಡಿದೆ.ಇದಕ್ಕೂ ಮೊದಲು ಬುಧವಾರ ಇದೇ ಗ್ರಾಮದ ಒಂದೇ ಕುಟುಂಬದ ಆರು ಮಂದಿ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದರು. ನಂತರ ಬಾಲಕಿ ತೇಜಸ್ವಿನಿಯೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಳು. ಇದೀಗ ಜಯಮ್ಮ ಹಾಗೂ ಶುಭ ಅವರ ಸಾವಿನಿಂದ ಒಟ್ಟು ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.ಮಂತ್ರಾಲಯಕ್ಕೆ ಕುಟುಂಬಸ್ಥರೊಂದಿಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಸಂತೋಷದ ಪ್ರಯಾಣ ಶೋಕಯಾತ್ರೆಯಾಗಿ ಮಾರ್ಪಟ್ಟಿದೆ. ಒಂದೇ ಕುಟುಂಬದ ಅನೇಕ ಸದಸ್ಯರನ್ನು ಕಳೆದುಕೊಂಡ ಶೆಟ್ಟಿಗೆರೆ ಗ್ರಾಮದಲ್ಲಿ ಸೂತಕದ ವಾತಾವರಣ ಆವರಿಸಿದೆ.ಘಟನೆಯ ತೀವ್ರತೆಗೆ ಗ್ರಾಮಸ್ಥರು ಕಂಗಾಲಾಗಿದ್ದು, ಮೃತರ ಅಂತ್ಯಕ್ರಿಯೆಗಳು ದುಃಖಭರಿತ ವಾತಾವರಣದಲ್ಲಿ ನಡೆಯುತ್ತಿವೆ. ಕುಟುಂಬಸ್ಥರ ಅಳಲು, ಆಕ್ರಂದನಗಳು ಮನಕಲಕುವಂತಿದ್ದು, ಗ್ರಾಮದಲ್ಲಿ ಶೋಕದ ಮೌನ ಆವರಿಸಿದೆ.
ಅಪಘಾತದಲ್ಲಿ ಗಾಯಗೊಂಡಿದ್ದ ಶೆಟ್ಟಿಗೆರೆಯ ಮತ್ತಿಬ್ಬರು ಸಾವು
ರಸ್ತೆ ಅಪಘಾತ ಪ್ರಕರಣದಲ್ಲಿ ಗಾಯಗೊಂಡಿದ್ದ ಇನ್ನಿಬ್ಬರು ಮಹಿಳೆಯರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವುದರಿಂದ ಮೃತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಈ ದುರ್ಘಟನೆ ತಾಲೂಕಿನ ಶೆಟ್ಟಿಗೆರೆ ಗ್ರಾಮದ ಒಂದೇ ಕುಟುಂಬವನ್ನು ಕಣ್ಣೀರಿನಲ್ಲಿ ಮುಳುಗಿಸಿದ್ದು, ಇಡೀ ಗ್ರಾಮವೇ ಶೋಕಸಾಗರದಲ್ಲಿ ತೇಲುತ್ತಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಜಯಮ್ಮ (65) ಮತ್ತು ಶುಭ (35) ಅವರು ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕೊನೆಯುಸಿರೆಳೆದಿದ್ದಾರೆ. ಇಬ್ಬರೂ ಶೆಟ್ಟಿಗೆರೆ ಗ್ರಾಮದವರಾಗಿದ್ದು, ಈ ದುರ್ಘಟನೆ ಗ್ರಾಮಕ್ಕೆ ಮತ್ತಷ್ಟು ದುಃಖವನ್ನುಂಟುಮಾಡಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.