ಎಂದಿನಂತೆ ಮೀನು ಹಿಡಿಯುವ ಕಾರ್ಯದಲ್ಲಿ ತೊಡಗಿದ್ದ ಅವರು, ರಾತ್ರಿ ಕತ್ತಲಾದರೂ ಮನೆಗೆ ಹಿಂದಿರುಗದೆ ಅಲ್ಲಿಯೇ ಮೀನು ಹಿಡಿಯುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಇಬ್ಬರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ರಾತ್ರಿ ಕಳೆದರೂ ಇಬ್ಬರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶುಕ್ರವಾರ ಬೆಳಿಗ್ಗೆ ಅವರು ನೀರಿನಲ್ಲಿ ಮುಳುಗಿರುವ ವಿಚಾರ ತಿಳಿದುಬಂದಿದ್ದು, ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ಆರಂಭಿಸಿ ಎರಡೂ ಶವಗಳನ್ನು ಹೊರತೆಗೆದಿದ್ದಾರೆ.

ಹಾಸನ: ಮೀನು ಹಿಡಿಯಲು ತೆರಳಿದ್ದ ಇಬ್ಬರು ಸ್ನೇಹಿತರು ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಸಂಜೆ ಮೀನು ಹಿಡಿಯಲು ತೆರಳಿದ್ದವರು ರಾತ್ರಿಯಾದರೂ ಮನೆಗೆ ವಾಪಸಾಗದೆ ನೀರುಪಾಲಾಗಿದ್ದು, ಶುಕ್ರವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಸಿಡ್ಲುಹೊಸಳ್ಳಿ ಗ್ರಾಮದ ಪರಮೇಶ್ (೪೩) ಹಾಗೂ ಹಿರಗನಹಳ್ಳಿ ಗ್ರಾಮದ ಪುಟ್ಟರಾಜು (೪೫) ಎಂದು ಗುರುತಿಸಲಾಗಿದೆ. ಇಬ್ಬರೂ ಗುರುವಾರ ಸಂಜೆ ಮೀನು ಹಿಡಿಯುವ ಉದ್ದೇಶದಿಂದ ಹೇಮಾವತಿ ಜಲಾಶಯದ ಹಿನ್ನೀರಿಗೆ ತೆರಳಿದ್ದರು. ಎಂದಿನಂತೆ ಮೀನು ಹಿಡಿಯುವ ಕಾರ್ಯದಲ್ಲಿ ತೊಡಗಿದ್ದ ಅವರು, ರಾತ್ರಿ ಕತ್ತಲಾದರೂ ಮನೆಗೆ ಹಿಂದಿರುಗದೆ ಅಲ್ಲಿಯೇ ಮೀನು ಹಿಡಿಯುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಇಬ್ಬರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ರಾತ್ರಿ ಕಳೆದರೂ ಇಬ್ಬರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಶುಕ್ರವಾರ ಬೆಳಿಗ್ಗೆ ಅವರು ನೀರಿನಲ್ಲಿ ಮುಳುಗಿರುವ ವಿಚಾರ ತಿಳಿದುಬಂದಿದ್ದು, ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ಆರಂಭಿಸಿ ಎರಡೂ ಶವಗಳನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಗೊರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಯ ಕುರಿತು ಮಾಹಿತಿ ಸಂಗ್ರಹಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.