ಸಾರಾಂಶ
‘ಶಕ್ತಿ’ ಪತ್ರಿಕೆಯ ಪ್ರಧಾನ ಸಂಪಾದಕ ಜಿ. ರಾಜೇಂದ್ರ ರಾಜ್ಯಮಟ್ಟದ ‘ಡಾ.ಎಚ್ ನರಸಿಂಹಯ್ಯ’ ಪ್ರಶಸ್ತಿ ಹಾಗೂ ಪದ್ಮಶ್ರೀ ಪ್ರಶಸ್ತಿ ವಿಜೇತ ಜಾನಪದ ತಜ್ಞ ರಾಣಿ ಮಾಚಯ್ಯ ‘ಚೈತನ್ಯ ಸ್ತ್ರೀ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಎರಡು ಪ್ರತಿಷ್ಠಿತ ರಾಜ್ಯಮಟ್ಟದ ವಾರ್ಷಿಕ ಪ್ರಶಸ್ತಿಗಳಿಗೆ ಕೊಡಗು ಜಿಲ್ಲೆಯ ಇಬ್ಬರು ಸಾಧಕರು ಆಯ್ಕೆಯಾಗಿದ್ದಾರೆ.‘ಶಕ್ತಿ’ ಪತ್ರಿಕೆಯ ಪ್ರಧಾನ ಸಂಪಾದಕ ಜಿ. ರಾಜೇಂದ್ರ ಅವರಿಗೆ ರಾಜ್ಯಮಟ್ಟದ ‘ಡಾ.ಎಚ್ ನರಸಿಂಹಯ್ಯ’ ಪ್ರಶಸ್ತಿ ಹಾಗೂ ಪದ್ಮಶ್ರೀ ಪ್ರಶಸ್ತಿ ವಿಜೇತ ಜಾನಪದ ತಜ್ಞ ರಾಣಿ ಮಾಚಯ್ಯ ‘ಚೈತನ್ಯ ಸ್ತ್ರೀ’ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯದಲ್ಲಿ ಜಿಲ್ಲೆಗೊಬ್ಬರಂತೆ ಜೀವಮಾನ ಸಾಧಕರನ್ನು ಗುರುತಿಸಿ ‘ಎಚ್ ಎನ್’ ಪ್ರಶಸ್ತಿ ನೀಡಲಾಗುತ್ತಿದ್ದು ಕೊಡಗು ಜಿಲ್ಲೆಯಲ್ಲಿ ಹಿರಿಯ ಪತ್ರಕರ್ತ ಶಕ್ತಿ ಜಿ. ರಾಜೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪರಿಷತ್ ರಾಜ್ಯ ಅಧ್ಯಕ್ಷ ಡಾ. ಹುಲಿಕಲ್ ನಟರಾಜ್ ತಿಳಿಸಿದ್ದಾರೆ.ರಾಜ್ಯಮಟ್ಟದಲ್ಲಿ ವಿಶಿಷ್ಟ ಸಾಧನೆ ಮಾಡಿದ ಮಹಿಳಾ ಸಾಧಕರಿಗೆ ಸಾಧನಾ ಪ್ರಶಸ್ತಿ ‘ಚೈತನ್ಯ ಸ್ತ್ರೀ’ ಪ್ರಶಸ್ತಿ ಕೊಡಗು ಜಿಲ್ಲೆಯ ರಾಣಿ ಮಾಚಯ್ಯ ಅವರಿಗೆ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯಮಟ್ಟದ ನಾಲ್ಕನೇ ವೈಜ್ಞಾನಿಕ ಸಮ್ಮೇಳನ ಡಿ.28 ಮತ್ತು 29ರಂದು ಬೆಂಗಳೂರು ಯಲಹಂಕ ತಾಲೂಕು ಬಾಗಲೂರು ವಿ ಜೆ ಇಂಟರ್‌ನ್ಯಾಶನಲ್ ಶಾಲಾ ಮೈದಾನದಲ್ಲಿ ನಡೆಯಲಿದ್ದು ಡಿ.29ರಂದು ಸಾಧಕರನ್ನು ಗೌರವಿಸಲಾಗುವುದು ಎಂದು ಪರಿಷತ್ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷೆ ವನಿತಾ ಚಂದ್ರಮೋಹನ್ ತಿಳಿಸಿದ್ದಾರೆ.ಖ್ಯಾತ ಚಲನಚಿತ್ರ ನಟಿ ಉಮಾಶ್ರೀ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು ಎಂದು ತಿಳಿಸಿದ್ದಾರೆ.