ಎರಡು ಪೋಲಿಯೊ ಹನಿ ಮಕ್ಕಳಿಗೆ ಜೀವಾಮೃತವಾಗಿದ್ದು, ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಈ ಪೋಲಿಯೊ ಹನಿ ಹಾಕಿಸುವಂತೆ ಶಾಸಕ ಪ್ರಸಾದ ಅಬ್ಬಯ್ಯ ಕರೆ ನೀಡಿದರು.
ಹುಬ್ಬಳ್ಳಿ: ಎರಡು ಪೋಲಿಯೊ ಹನಿ ಮಕ್ಕಳಿಗೆ ಜೀವಾಮೃತವಾಗಿದ್ದು, ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಈ ಪೋಲಿಯೊ ಹನಿ ಹಾಕಿಸುವಂತೆ ಶಾಸಕ ಪ್ರಸಾದ ಅಬ್ಬಯ್ಯ ಕರೆ ನೀಡಿದರು.
ಇಲ್ಲಿನ ಎಸ್.ಎಸ್. ಕೃಷ್ಣ ನಗರದಲ್ಲಿರುವ ನಮ್ಮ ಕ್ಲಿನಿಕ್ ನಲ್ಲಿ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಮಾತನಾಡಿ, ಜಿಲ್ಲೆಯ ಸುಮಾರು 1.23 ಲಕ್ಷ ಮಕ್ಕಳು ಪಾಲಿಕೆ ವ್ಯಾಪ್ತಿಯಲ್ಲಿ ಬರುತ್ತಾರೆ. ಜಿಲ್ಲೆಯ ಶೇ. 60ರಷ್ಟು ಮಕ್ಕಳು ಇಲ್ಲಿದ್ದಾರೆ. ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಹನಿ ಹಾಕಿಸಬೇಕು. ಇಲ್ಲಿನ ಜನರಿಗೆ ಅನುಕೂಲವಾಗುವಂತೆ ಆಸ್ಪತ್ರೆ ನಿರ್ಮಿಸಲಾಗಿದೆ. ಪೋಲಿಯೊ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ಡಿಎಚ್‌ಒ ಡಾ. ಎಸ್.ಎಂ. ಹೊನಕೇರಿ ಮಾತನಾಡಿದರು. ಪಾಲಿಕೆ ಸದಸ್ಯೆ ಫಾಮೀದಾ ಕಾರಡಗಿ, ಹು-ಧಾ ಮಹಾನಗರ ಪಾಲಿಕೆ ವೈದ್ಯಾಧಿಕಾರಿ ಡಾ. ಶ್ರೀಧರ ದಂಡಪ್ಪನವರ, ತಾಲೂಕು ವೈದ್ಯಾಧಿಕಾರಿ ಡಾ. ಹುಲಗಣ್ಣ ಇಂಜಗನರಿ, ತಾಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ಓಂಕಾರ ಗೌಡರ, ಡಾ. ಪ್ರವೀಣ ಗೌರಿ, ಮುಖಂಡರಾದ ಶಬ್ಬೀರ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಪಾಲಿಕೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಸಾರ್ವಜನಿಕರು ಪಾಲ್ಗೊಂಡಿದ್ದರು. ಡಾ. ಬಸವರಾಜ ಕಮಡೊಳ್ಳಿ ಸ್ವಾಗತಿಸಿದರು.