ಮೊದಲ ಎರಡು ದಿನಗಳ ಕಾರ್ಯಾಚರಣೆಯಲ್ಲಿ ಆನೆಗಳು ಕೈಗೆ ಸಿಗದೆ ತಪ್ಪಿಸಿಕೊಂಡಿದ್ದವು. ಮೂರನೇ ದಿನವಾದ ಗುರುವಾರ ಕ್ಯಾಪ್ಟನ್ ಪ್ರಶಾಂತ್ ಅವರ ನೇತೃತ್ವದಲ್ಲಿ ಕುಮ್ಕಿ ಸಾಕಾನೆಗಳ ನೆರವಿನೊಂದಿಗೆ ಕಾರ್ಯಾಚರಣೆ ಮುಂದುವರಿಸಲಾಯಿತು. ದಟ್ಟ ಅರಣ್ಯ ಪ್ರದೇಶ ಹಾಗೂ ಕಾಫಿ ತೋಟಗಳ ನಡುವೆ ಪುಂಡಾನೆಗಳನ್ನು ಪತ್ತೆಹಚ್ಚಿ ನಿಯಂತ್ರಣಕ್ಕೆ ತರುವುದು ಸಿಬ್ಬಂದಿಗೆ ಸವಾಲಿನ ಕೆಲಸವಾಗಿತ್ತು. ಡ್ರೋನ್ ಕ್ಯಾಮೆರಾ ಮೂಲಕ ಆನೆಗಳ ಚಲನವಲನವನ್ನು ಗಮನಿಸಿ, ಅನುಭವಿ ಮಾವುತರು, ಅರಣ್ಯ ಸಿಬ್ಬಂದಿ ಹಾಗೂ ಪಶುವೈದ್ಯರ ತಂಡದ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಬೇಲೂರು
ಮಲೆನಾಡು ಭಾಗದ ಜನರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆಗಳ ಹಾವಳಿಯ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕೈಗೊಂಡಿರುವ ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಸಕಲೇಶಪುರ ತಾಲೂಕಿನ ಉದೇವಾರ ಎಸ್ಟೇಟ್ ಸಮೀಪ ಗುರುವಾರ ನಡೆದ ಕಾರ್ಯಾಚರಣೆಯಲ್ಲಿ ಎರಡು ಪುಂಡಾನೆಗಳನ್ನು ಅರವಳಿಕೆ ಮದ್ದು ನೀಡಿ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮೂರು ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಗಳ ಚಲನವಲನ ಪತ್ತೆಹಚ್ಚಲು ಸಾಕಷ್ಟು ಶ್ರಮಿಸುತ್ತಿದ್ದರು. ಮೊದಲ ಎರಡು ದಿನಗಳ ಕಾರ್ಯಾಚರಣೆಯಲ್ಲಿ ಆನೆಗಳು ಕೈಗೆ ಸಿಗದೆ ತಪ್ಪಿಸಿಕೊಂಡಿದ್ದವು. ಮೂರನೇ ದಿನವಾದ ಗುರುವಾರ ಕ್ಯಾಪ್ಟನ್ ಪ್ರಶಾಂತ್ ಅವರ ನೇತೃತ್ವದಲ್ಲಿ ಕುಮ್ಕಿ ಸಾಕಾನೆಗಳ ನೆರವಿನೊಂದಿಗೆ ಕಾರ್ಯಾಚರಣೆ ಮುಂದುವರಿಸಲಾಯಿತು. ದಟ್ಟ ಅರಣ್ಯ ಪ್ರದೇಶ ಹಾಗೂ ಕಾಫಿ ತೋಟಗಳ ನಡುವೆ ಪುಂಡಾನೆಗಳನ್ನು ಪತ್ತೆಹಚ್ಚಿ ನಿಯಂತ್ರಣಕ್ಕೆ ತರುವುದು ಸಿಬ್ಬಂದಿಗೆ ಸವಾಲಿನ ಕೆಲಸವಾಗಿತ್ತು. ಡ್ರೋನ್ ಕ್ಯಾಮೆರಾ ಮೂಲಕ ಆನೆಗಳ ಚಲನವಲನವನ್ನು ಗಮನಿಸಿ, ಅನುಭವಿ ಮಾವುತರು, ಅರಣ್ಯ ಸಿಬ್ಬಂದಿ ಹಾಗೂ ಪಶುವೈದ್ಯರ ತಂಡದ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಕೊನೆಗೂ ಅರವಳಿಕೆ ಮದ್ದು ಪ್ರಯೋಗಿಸಿ ಎರಡು ಪುಂಡಾನೆಗಳನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಯಿತು. ಕುಮ್ಕಿ ಆನೆಗಳ ನೆರವಿನಿಂದ ಸೆರೆಹಿಡಿದ ಆನೆಗಳನ್ನು ಸುರಕ್ಷಿತವಾಗಿ ನಿಯಂತ್ರಣಕ್ಕೆ ತರಲಾಯಿತು.