ಸಾರಾಂಶ
ಹೊಸಕೋಟೆ: ಪೊಲೀಸ್ ಉಪ ವಿಭಾಗ ವ್ಯಾಪ್ತಿಯ ಆವಲಹಳ್ಳಿ ಪೊಲೀಸರು ಸರಗಳ್ಳತನ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.
ಹೊಸಕೋಟೆ: ಪೊಲೀಸ್ ಉಪ ವಿಭಾಗ ವ್ಯಾಪ್ತಿಯ ಆವಲಹಳ್ಳಿ ಪೊಲೀಸರು ಸರಗಳ್ಳತನ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆ ದಾಸನಪುರ ಹೋಬಳಿಯ ಮಾದವರ ಗ್ರಾಮದ ಧನುಷ್ ಅಲಿಯಾಸ್ ಬಲ್ಲಿ (22), ಹೊಸಕೋಟೆ ಟೌನಿನ ಸಲೂನ್ ನಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಅಲಿಯಾಸ್ ಅಭಿ(19) ಬಂಧಿತರು. ಬಂಧಿತರಿಂದ 103 ಗ್ರಾಂ ಚಿನ್ನಾಭರಣ ಹಾಗೂ 3 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೀಗ ಹಾಕಿರುವ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದ ಇವರು ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದರು. ಸರಗಳ್ಳತನಕ್ಕೆ ಧನುಷ್ ಒಬ್ಬನೇ ಹೋಗುತ್ತಿದ್ದ. ಬಂಧಿತರು ಈ ಹಿಂದೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳವು ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದನೆಂದು ಪೊಲೀಸರು ತಿಳಿಸಿದ್ದಾರೆ.
ಈ ಸರಗಳ್ಳತನ ಹಾಗೂ ಮನೆಗಳ್ಳತನ ಆರೋಪಿಗಳನ್ನ ಪತ್ತೆಹಚ್ಚಲು ಡಿವೈಎಸ್ಪಿ ಶಂಕರ್ ಗೌಡ ಪಾಟೀಲ್ ಅವರ ನೇತೃತ್ವದಲ್ಲಿ ಶ್ರಮಿಸಿದ ಅವಲಹಳ್ಳಿ ಠಾಣೆ ಇನ್ಸ್ಪೆಕ್ಟರ್ ಸೋಮಶೇಖರ್, ಪಿಎಸ್‌ಐ ರಾಜಣ್ಣ, ಎಎಸ್‌ಐ ಸೈಯದ್ ಅಫ್ರೋಜ್ ಸೇರಿದಂತೆ ಅಪರಾಧ ವಿಭಾಗದ ಸಿಬ್ಬಂದಿಗಳನ್ನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡೆ ಎಎಸ್ಪಿ ಪುರುಷೋತ್ತಮ್ ಅಭಿನಂದಿಸಿದ್ದಾರೆ.ಫೋಟೋ 22 ಹೆಚ್‌ಎಸ್‌ಕೆ 2
ಹೊಸಕೋಟೆ ಪೊಲೀಸ್ ಉಪವಿಭಾಗ ವ್ಯಾಪ್ತಿಯ ಅವಲಹಳ್ಳಿ ಪೊಲೀಸರು ಕಾರ್ಯಚರಣೆ ನಡೆಸಿ ಸರಗಳ್ಳತನ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.