ಹೊಳೆನರಸೀಪುರದಲ್ಲಿ 2232 ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳು: ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಜಿ.ಎನ್.

| Published : Mar 23 2024, 01:00 AM IST

ಹೊಳೆನರಸೀಪುರದಲ್ಲಿ 2232 ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳು: ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಜಿ.ಎನ್.
Share this Article
  • FB
  • TW
  • Linkdin
  • Email

ಸಾರಾಂಶ

ಹೊಳೆನರಸೀಪುರದಲ್ಲಿ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.೨೫ ರಿಂದ ಪ್ರಾರಂಭವಾಗುತ್ತದೆ. ಏಪ್ರಿಲ್ ೪ಕ್ಕೆ ಮುಕ್ತಾಯವಾಗುತ್ತದೆ. ೨೨೩೨ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಜಿ.ಎನ್. ಹೇಳಿದರು.

25 ರಿಂದ ಏ.4 ಪರೀಕ್ಷೆಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.೨೫ ರಿಂದ ಪ್ರಾರಂಭವಾಗುತ್ತದೆ. ಏಪ್ರಿಲ್ ೪ಕ್ಕೆ ಮುಕ್ತಾಯವಾಗುತ್ತದೆ. ೨೨೩೨ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಪರೀಕ್ಷೆ ನಡೆಸಲು ಸರ್ಕಾರದ ನಿಯಮಾನುಸಾರ ಸಕಲ ಸಿದ್ಧತೆಯನ್ನು ವ್ಯವಸ್ಥಿತವಾಗಿ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಜಿ.ಎನ್. ತಿಳಿಸಿದರು.

ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ತಾಲೂಕಿನಲ್ಲಿ ೧೦೬೨ ಬಾಲಕರು ಹಾಗೂ ೧೧೭೦ ಬಾಲಕಿಯರು ಒಟ್ಟು ೮ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಜತೆಗೆ ೪೬ ಅಭ್ಯರ್ಥಿಗಳು ಖಾಸಗಿಯಾಗಿ ತಾಲೂಕು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದರು.

ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ೨೪೬, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ೨೬೫, ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಪಾರ್ಕ್ ಪಕ್ಕ ೨೨೦, ಹಳ್ಳಿಮೈಸೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ೪೯೩, ಪಡುವಲಹಿಪ್ಪೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ೧೯೫, ಹರಿಹರಪುರ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ೨೮೦, ಸೋಮನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ೩೦೭, ತಟ್ಟೆಕೆರೆ ಆದರ್ಶ ವಿದ್ಯಾಲಯದಲ್ಲಿ ೨೨೬ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅಗತ್ಯ ಸಿದ್ಧತೆ ಮಾಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ಪರೀಕ್ಷಾ ಮಂಡಳಿಯ ನಿಯಮಾನುಸಾರ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಹಾಗೂ ಕಸ್ಟೋಡಿಯನ್ ಅವರಿಗೆ ಟೆಲಿ ಕಾನ್ಫರೆನ್ಸ್ ಮೂಲಕ ಹಾಗೂ ಬಿಇಒ ಅಧ್ಯಕ್ಷತೆಯಲ್ಲಿ ಅಗತ್ಯ ಎಲ್ಲಾ ಮಾಹಿತಿ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸ್ಥಾನಿಕ ತನಿಖಾ ಜಾಗೃತದಳ, ಮೊಬೈಲ್ ಸ್ವಾಧೀನಾಧಿಕಾರಿಗಳನ್ನು ನಿಯೋಜಿಸಿ, ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ವ್ಯವಸ್ಥೆ ಮಾಡಲಾಗಿದೆ. ಪ್ರಥಮ ಭಾಷೆ ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆ ಬರೆಯಲು ೩ ಗಂಟೆ ಮತ್ತು ಪ್ರಶ್ನೆ ಪತ್ರಿಕೆ ಓದಲು ೧೫ ನಿಮಿಷ ಹಾಗೂ ದ್ವಿತೀಯ ಮತ್ತು ತೃತೀಯ ಪರೀಕ್ಷೆ ಬರೆಯಲು ೨.೪೫ ಗಂಟೆ ಮತ್ತು ಪ್ರಶ್ನೆಪತ್ರಿಕೆ ಓದಲು ೧೫ ನಿಮಿಷ ನಿಗದಿ ಪಡಿಸಿದೆ ಎಂದರು. ತಾಲೂಕಿನಲ್ಲಿ ಶಿಕ್ಷಕರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ, ಪರೀಕ್ಷಾ ಸಿದ್ಧತೆ ಹಾಗೂ ನಿರ್ಭಯವಾಗಿ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಲು ಮಾರ್ಗದರ್ಶನ ನೀಡಿದ್ದಾರೆ. ಆದ್ದರಿಂದ ಉತ್ತಮ ಫಲಿತಾಂಶ ಬರುವ ನಿರೀಕ್ಷೆ ಇದೆ ಎಂದರು.ಹೊಳೆನರಸೀಪುರ ತಾಲುಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗೇಗೌಡ ಜಿ.ಎನ್.