ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ

| Published : May 14 2024, 01:09 AM IST

ಸಾರಾಂಶ

ಪಿಕಪ್‌ ಮತ್ತು ದ್ವಿ ಚಕ್ರ ವಾಹನ ಡಿಕ್ಕಿಯಾಗಿ ದ್ವಿ ಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ದೂರಿನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸೋಮವಾರಪೇಟೆ: ಪಿಕಪ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಸಮೀಪದ ತಣ್ಣೀರುಹಳ್ಳ ಗ್ರಾಮದಲ್ಲಿ ನಡೆದಿದೆ. ಮೋರಿಕಲ್ಲು ಬಸವನಹಳ್ಳಿ ಗ್ರಾಮದ ವಿಷ್ಣು ಗಾಯಗೊಂಡ ಸವಾರ. ಬಳಗುಂದ ಗ್ರಾಮದ ಯೋಗೇಶ್ ಪಿಕಪ್‌ ಚಲಾಯಿಸುತ್ತಿದ್ದರು. ಡಿಕ್ಕಿಯ ರಭಸಕ್ಕೆ ಸವಾರ ವಿಷ್ಣುವಿನ ತಲೆ, ಕಾಲಿನ ಭಾಗಕ್ಕೆ ಗಂಭೀರ ಗಾಯವಾಗಿದೆ. ತಕ್ಷಣ ಸ್ಥಳೀಯರು ಗಾಯಾಳುವನ್ನು ಸೋಮವಾರಪೇಟೆ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳುವಿನ ಸಂಬಂಧಿ ಸಿ.ಎಚ್‌. ರದೀಶ್ ಎಂಬವರು ನೀಡಿದ ದೂರಿನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

----------------------------

ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಸಿದ್ಧತೆಕನ್ನಡಪ್ರಭ ವಾರ್ತೆ ಸಿದ್ದಾಪುರವಿರಾಜಪೇಟೆ ತಾಲೂಕಿನ ತಿತಿಮತಿ ಅರಣ್ಯ ವಲಯದ ವ್ಯಾಪ್ತಿಗೆ ಒಳಪಡುವ ಬಾಡಗ ಬಾಣಂಗಾಲ, ಕೊಡಗು ಶ್ರೀರಂಗಪಟ್ಟಣ, ಮೇಕೂರು ಹೊಸ್ಕೆರಿ, ಮಾಲ್ದಾರೆ, ಚೆನ್ನಯ್ಯನಕೋಟೆ, ಕರಡಿಗೋಡು, ಪುಲಿಯೇರಿ, ಹೊಸೂರು, ಇಂಜಿಲಗೆರೆ ಸೇರಿದಂತೆ ಹಲವು ಗ್ರಾಮಗಳ ಕಾಫಿ ತೋಟಗಳಲ್ಲಿ ಕಾಡಾನೆ ಹಾವಳಿ ಅತಿಯಾಗಿದೆ. ಕೆಲ ದಿನಗಳಿಂದ ಕಾಡಾನೆ ಹಿಂಡು ಕಾಫಿ ತೋಟಗಳಲ್ಲಿ ಬೀಡುಬಿಟ್ಟ ಹಿಂಡಿನ ಪೈಕಿ ಜನರಿಗೆ ಉಪಟಳ ನೀಡುತ್ತಿರುವ 3 ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆಗೆ ವಿರಾಜಪೇಟೆ ವಿಭಾಗದ, ಅರಣ್ಯ ಇಲಾಖೆ ಸಜ್ಜಾಗಿದೆ.

ಮಂಗಳವಾರರಿಂದ ಬಾಡಗ ಬಾಣಂಗಾಲ ಗ್ರಾಮದ ಇಎಲ್ ಕೆ ಹಿಲ್ ಎಸ್ಟೇಟ್ ಗೆ (ಬಿಬಿಟಿಸಿ) ಒಳಪಡುವ ಬಾಡಗ ಬಾಣಂಗಾಲ ಕಾಫಿ ಎಸ್ಟೇಟ್ ಹಾಗೂ ಸುತ್ತಮುತ್ತಲಿನ ತೋಟಗಳಲ್ಲಿ ಕಾರ್ಯಾಚರಣೆ ಪ್ರಾರಂಭವಾಗುತ್ತಿರುವುದರಿಂದ ಸುತ್ತ ಮುತ್ತಲಿನ ಗ್ರಾಮಗಳ ಸಾರ್ವಜನಿಕರು, ತೋಟದ ಮಾಲೀಕರು, ಕಾರ್ಮಿಕರು ಹಾಗೂ ಶಾಲಾ ಮಕ್ಕಳು ಜಾಗೂರುಕತೆಯಿಂದ ಇರಬೇಕಾಗಿ ಹಾಗೂ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗೆ ಕಾರ್ಯಾಚರಣೆ ಪೂರ್ಣಗೊಳಿಸಲು ಸಹಕಾರ ನೀಡಬೇಕಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.