ದ್ವಿಚಕ್ರ ವಾಹನ ಕಳ್ಳತನ: ಓರ್ವನ ಬಂಧನ

| Published : Nov 16 2025, 01:15 AM IST

ಸಾರಾಂಶ

ಕಗ್ಗಲೀಪುರ, ಹಾರೋಹಳ್ಳಿ, ಬಿಡದಿ, ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹಲವು ಕಳ್ಳತನ ಪ್ರಕರಣದ ಪ್ರಮುಖ ಆರೋಪಿ ಪೊಲೀಸರಿಗೆ ತಲೆನೋವಾಗಿದ್ದನು.

ರಾಮನಗರ: ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮನಹಳ್ಳಿ ಗ್ರಾಮದ ಕಾಳಿಕಾಂಬ ದೇವಸ್ಥಾನದ ರಸ್ತೆಯ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಮಾಡಿದ್ದ ಆರೋಪಿಯನ್ನು ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ.

ಕಗ್ಗಲೀಪುರ, ಹಾರೋಹಳ್ಳಿ, ಬಿಡದಿ, ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹಲವು ಕಳ್ಳತನ ಪ್ರಕರಣದ ಪ್ರಮುಖ ಆರೋಪಿ ಪೊಲೀಸರಿಗೆ ತಲೆನೋವಾಗಿದ್ದನು. ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಕೊನೆಗೂ ಆತನನ್ನು ಬಂಧಿಸಿದ್ದಾರೆ

ಬಂಧಿತ ಆರೋಪಿಯಿಂದ ಕಳ್ಳತನ ಮಾಡಿದ್ದ ಸುಮಾರು 2 ಲಕ್ಷ ರು. ಮೌಲ್ಯದ 4 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ಒಟ್ಟು 4 ಪ್ರಕರಣಗಳನ್ನು ಪತ್ತೆ ಮಾಡುವಲ್ಲಿ ಕಗ್ಗಲೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.