ಸಾರಾಂಶ
ನ್ಯಾಯಮೂರ್ತಿ, ನಾಡೋಜ ಡಾ. ಶಿವರಾಜ ವಿ. ಪಾಟೀಲರು ರಚಿಸಿರುವ ''''ಸಂಜೆಗೊಂದು ನುಡಿ ಚಿಂತನ-365 ಮತ್ತು ಸಾಧ್ವಿ ಶಿರೋಮಣಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ'''' ಕೃತಿಗಳ ಲೋಕಾರ್ಪಣೆ ಸಮಾರಂಭ ಜು.20 ರಂದು ಸಂಜೆ 4 ಕ್ಕೆ ಸರ್ಕಾರಿ ಪದವಿ ಮಹಾವಿದ್ಯಾಲಯದ ಲಿಂ.ವಿಶ್ವನಾಥರಡ್ಡಿ ಮುದ್ನಾಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ
ಕನ್ನಡಪ್ರಭ ವಾರ್ತೆ ಯಾದಗಿರಿ
ನ್ಯಾಯಮೂರ್ತಿ, ನಾಡೋಜ ಡಾ. ಶಿವರಾಜ ವಿ. ಪಾಟೀಲರು ರಚಿಸಿರುವ ''''''''''''''''ಸಂಜೆಗೊಂದು ನುಡಿ ಚಿಂತನ-365 ಮತ್ತು ಸಾಧ್ವಿ ಶಿರೋಮಣಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ'''''''''''''''' ಕೃತಿಗಳ ಲೋಕಾರ್ಪಣೆ ಸಮಾರಂಭ ಜು.20 ರಂದು ಸಂಜೆ 4 ಕ್ಕೆ ಸರ್ಕಾರಿ ಪದವಿ ಮಹಾವಿದ್ಯಾಲಯದ ಲಿಂ.ವಿಶ್ವನಾಥರಡ್ಡಿ ಮುದ್ನಾಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಪ್ರತಿಷ್ಠಾನದ ಕಾರ್ಯದರ್ಶಿ ಪ್ರೊ. ಚೆನ್ನಾರಡ್ಡಿ ಪಾಟೀಲ್ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಸಾನ್ನಿಧ್ಯವನ್ನು ಅಬ್ಬೆತುಮಕೂರಿನ ವಿಶ್ವಾರಾಧ್ಯ ಮಠದ ಪೀಠಾಧಿಪತಿ ಡಾ. ಗಂಗಾಧರ ಸ್ವಾಮಿಗಳು ವಹಿಸಲಿದ್ದಾರೆ. ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ಈ ಎರಡು ಕೃತಿಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ವಿಶ್ರಾಂತ ಜಿಲ್ಲಾ ಪ್ರಧಾನ ನ್ಯಾಯಾಧೀಶರು ಹಾಗೂ ಅಧ್ಯಕ್ಷರು, ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್.ಎಂ.ರಡ್ಡಿ ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಪ್ರಾಚಾರ್ಯರಾದ ಡಾ. ಸುಭಾಶ್ಚಂದ್ರ ಕೌಲಗಿ ಭಾಗವಹಿಸುವರು. ವಿಶ್ರಾಂತ ಜಿಲ್ಲಾ ನ್ಯಾಯಾಧೀಶರು ಹಾಗೂ ಉಪಾಧ್ಯಕ್ಷರು, ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಪ್ರತಿಷ್ಠಾನದ ಉಪಾಧ್ಯಕ್ಷರಾದ ಎನ್. ಶರಣಪ್ಪ, ಪ್ರತಿಷ್ಠಾನದ ಟ್ರಷ್ಟಿ ಎಸ್. ಬಿ. ಪಾಟೀಲ್ ಉಪಸ್ಥಿತರಿರುತ್ತಾರೆಂದು ಪ್ರೊ.ಚನ್ನಾರಡ್ಡಿ ಹೇಳಿದರು. ಸರಕಾರಿ ಸ್ವಾಯತ್ತ ಮಹಾವಿದ್ಯಾಲಯದ ಉಪನ್ಯಾಸಕಿ ಡಾ.ಶೈಲಜಾ ಬಾಗೇವಾಡಿ ಕೃತಿಗಳ ಕುರಿತು ಮಾತನಾಡಲಿದ್ದಾರೆ. ಪ್ರತಿಷ್ಠಾನದ ಸಂಯೋಜಕ ಡಾ. ಕಲ್ಯಾಣರಾವ ಜಿ. ಪಾಟೀಲ್, ಡಾ.ಸಿದ್ದರಾಜ್ ರಡ್ಡಿ, ಹಿರಿಯ ವಕೀಲ ಎಸ್.ಬಿ.ಪಾಟೀಲ್ ಸೇರಿದಂತೆಯೇ ಇತರರಿದ್ದರು.